ಕಲ್ಪ ಮೀಡಿಯಾ ಹೌಸ್ | ಬೀದರ್ |
ಎಟಿಎಂಗೆ #ATM ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ #Bank Staff ಮೇಲೆ ದುಷ್ಕರ್ಮಿಗಳು ಹಾಡಹಗಲೇ ಗುಂಡಿನ ದಾಳಿ ನಡೆಸಿದ್ದು, ಓರ್ವ ಬ್ಯಾಂಕ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ #Robbery in Bidar ಬೀದರ್ನಲ್ಲಿ ನಡೆದಿದೆ.
ಬೀದರ್ನ ಎಸ್ಬಿಐ ಮುಖ್ಯ ಕಚೇರಿ ಮುಂಭಾಗದ ಎಟಿಎಂಗೆ ಇಂದು ಬೆಳಿಗ್ಗೆ ಬ್ಯಾಂಕ್ನ ಸಿಬ್ಬಂದಿಗಳು ಹಣ ಹಾಕಲು ಬಂದ ಸಂದರ್ಭದಲ್ಲಿ ದುಷ್ಕರ್ಮಿಗಳು ಸಿಬ್ಬಂದಿಗಳ ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ಪರಿಣಾಮ ಗಾಯಗೊಂಡಿದ್ದ ಎಸ್ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Also read: ಹಣ್ಣು, ತರಕಾರಿ ಹಾಳಾಗದಂತೆ ತಡೆಯಲು ನೈಸರ್ಗಿಕ ಶೂನ್ಯ ಶಕ್ತಿ ತಂಪು ಕೋಣೆ | ಏನಿದು?
ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಜಿಎಸ್ಸಿ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು, ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post