ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ನಿವಾಸದ ಆವರಣದಲ್ಲಿ ಕ್ಷೇತ್ರದ ಪೊಲಕಪಳ್ಳಿ, ಕಾಡವಾದ, ಹಜ್ಜರಗಿ, ಚಿಟ್ಟಾವಾಡಿ, ಬಗದಲ್ ತಾಂಡ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನ ಮುಖಂಡರು, ಯುವಕರು ನಿನ್ನೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದೇ ವೇಳೆ ಪಕ್ಷದ ಮುಖಂಡರಾದ ಶ್ರೀ ರೇವಣಸಿದ್ದಪ್ಪ ಬಾವಗಿರವರ ಜನ್ಮ ದಿನದ ಅಂಗವಾಗಿ ಕೇಕ್ ಕತ್ತರಿಸಿ, ಸನ್ಮಾನಿಸಿ ಗೌರವಿಸುವ ಮೂಲಕ ಶುಭ ಕೋರಿ, ಬಳಿಕ ಮಲ್ಕಾಪೂರ ಹಾಗೂ ಗೋವಿಂದ ತಾಂಡದ ವಿವಿಧ ಪಕ್ಷಗಳ ಮುಖಂಡರು ಮತ್ತು ಯುವಕರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

Also read: ಮಾಜಿ ಡಿಸಿಎಂ ಈಶ್ವರಪ್ಪ ಹತ್ಯೆಗೆ ಬಿಗ್ ಸ್ಕೆಚ್: ಸ್ಫೋಟಕ ಮಾಹಿತಿ ಬಹಿರಂಗ
ನಂತರ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ನಮ್ಮ ನಿವಾಸದ ಆವರಣದಲ್ಲಿ ಕ್ಷೇತ್ರದ ಬಗದಲ್, ಕಮಠಾಣಾ, ಮಿರ್ಜಾಪೂರ್ ಸೇರಿದಂತೆ ವಿವಿಧ ಗ್ರಾಮಗಳ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.











Discussion about this post