ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು, ಮಂಗಲಗಿ, ರೇಕುಳಗಿ, ನಿರ್ಣಾ, ಚಾಂಗಲೇರಾ, ದೇವಗಿರಿ ತಾಂಡ, ತ್ಯಾಜ್ ಮಿರ್ಜಾಪೂರ್, ಮನ್ನಾಎಖೇಳ್ಳಿ, ಸಂಗೊಳಗಿ ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಯುವಕರು, ಮಹಿಳೆಯರು, ಮುಖಂಡರು ನೂರಾರು ಸಂಖ್ಯೆಯಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ Bandeppa Khashempur ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಒಂಬತ್ತಕ್ಕೂ ಹೆಚ್ಚು ಗ್ರಾಮಗಳ ನೂರಾರು ಜನ ಯುವಕರು, ಮಹಿಳೆಯರು, ಮುಖಂಡರಿಗೆ ಮಂಗಳವಾರ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ವಿವಿಧ ಘಟಕಗಳಿಗೆ ನೇಮಕಗೊಂಡ ಕೆಲವರಿಗೆ ಆದೇಶ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ನಮ್ಮ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮೂಲಕ ಜನರು ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂಬುದು ಸಾಬೀತಾಗುತ್ತಿದೆ. ಈ ಬಾರಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್.ಡಿ ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ ಕುಮಾರಸ್ವಾಮಿರವರು ರಾಜ್ಯಾದ್ಯಂತ ಸಂಚಾರ ನಡೆಸಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ಬಾರಿ ರಾಜ್ಯದೆಲ್ಲಡೇ ಬೆಂಬಲ ವ್ಯಕ್ತವಾಗಿದೆ. ಪಕ್ಷದ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡು ಬೆಂಬಲ ಸೂಚಿಸಿದ್ದಾರೆ. ನಾವೆಲ್ಲರೂ ತಳಮಟ್ಟದಿಂದ ಪಕ್ಷವನ್ನು ಬಲಿ?ಗೊಳಿಸುವ ಕೆಲಸ ಮಾಡೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಆಣದೂರು, ಮಂಗಲಗಿ, ರೇಕುಳಗಿ, ನಿರ್ಣಾ, ಚಾಂಗಲೇರಾ, ದೇವಗಿರಿ ತಾಂಡ, ತ್ಯಾಜ್ ಮಿರ್ಜಾಪೂರ್, ಮನ್ನಾಎಖೇಳ್ಳಿ, ಸಂಗೊಳಗಿ ಸೇರಿದಂತೆ ವಿವಿಧ ಗ್ರಾಮಗಳಿಂದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು, ಕಾರ್ಯಕರ್ತರು, ಮಹಿಳೆಯರು, ಪಕ್ಷದ ಪ್ರಮುಖರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post