ಕಲ್ಪ ಮೀಡಿಯಾ ಹೌಸ್ | ಬೀದರ್ |
ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ, ಈ ಭಾಗದ ಪ್ರಭಾವಿ ನಾಯಕ ಸೂರ್ಯಕಾಂತ್ ನಾಗಮರಪಳ್ಳಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ H D Kumarswamy ಹಾಗೂ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೂರ್ಯಕಾಂತ್ ಜೆಡಿಎಸ್’ಗೆ ಸೇರ್ಪಡೆಗೊಂಡಿದ್ದಾರೆ.
ಉತ್ತರ ಕ್ಷೇತ್ರದಲ್ಲಿ ಭಾರೀ ಪ್ರಭಾವಿ ನಾಯಕರಾಗಿರುವ ಸೂರ್ಯಕಾಂತ್ ಅವರ ಸೇರ್ಪಡೆಯಿಂದ ಜೆಡಿಎಸ್’ಗೆ ಆನೆ ಬಲ ಬಂದಂತಾಗಿದೆ ಎಂದು ಸ್ಥಳೀಯ ಮುಖಂಡರು ಪ್ರತಿಕ್ರಿಯಿಸಿದ್ದಾರೆ.
Also read: ಬೀದರ್ ದಕ್ಷಿಣ: ಜೆಡಿಎಸ್ ಅಭ್ಯರ್ಥಿಯಾಗಿ ಬಂಡೆಪ್ಪ ಖಾಶೆಂಪುರ್ ಎ.18ರಂದು ನಾಮಪತ್ರ ಸಲ್ಲಿಕೆ
ಇವರು ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post