ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಕಮಠಾಣಾ ಗ್ರಾಮದಲ್ಲಿ ಇದೇ ಏಪ್ರಿಲ್ ೨೨ರ ಸಂಜೆ ಅದ್ಧೂರಿಯಾಗಿ ನಡೆಯಲಿರುವ ಜನತಾ ಜಲಧಾರೆ ಯಾತ್ರೆಯ ಬಹಿರಂಗ ಸಭೆ (ಬೃಹತ್ ಸಮಾವೇಶ) ಸ್ಥಳವನ್ನು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ರವರು ಬುಧವಾರ ಸಂಜೆ ಪರಿಶೀಲನೆ ನಡೆಸಿದರು.
ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಏ.22ರ ಸಂಜೆ ನನ್ನ ಕ್ಷೇತ್ರದ ಕಮಠಾಣಾದಲ್ಲಿ ಜನತಾ ಜಲಧಾರೆ ಯಾತ್ರೆಯ Janatha Jaladhare Yathre ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳು, ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ ಕುಮಾರಸ್ವಾಮಿರವರು ಸೇರಿದಂತೆ ಅನೇಕ ಜನ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರ, ಬೀದರ್ ಜಿಲ್ಲೆ ಸೇರಿದಂತೆ ಈ ಭಾಗದ ಬಹಳ? ಜನ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂದರು.
Also read: ಎ.22ರಿಂದ ಆರಂಭವಾಗಲಿದೆ ಶಿವಮೊಗ್ಗದ ಎಫ್’ಎಂ: ಏನೆಲ್ಲಾ ಕಾರ್ಯಕ್ರಮ ಪ್ರಸಾರವಾಗಲಿದೆ?
ಕಾರ್ಯಕ್ರಮದ ಸ್ಥಳ ನಿಗದಿಯಾದಾಗಿನಿಂದ ಎರಡು ಮೂರು ಬಾರಿ ಪರಿಶೀಲನೆ ನಡೆಸಿದ್ದೇನೆ. ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ದೊಡ್ಡಮಟ್ಟದ ಕಾರ್ಯಕ್ರಮ ಮಾಡಲಾಗುತ್ತಿದ್ದು, ವೇದಿಕೆ ಸೇರಿದಂತೆ ಎಲ್ಲಾ ರೀತಿಯ ಸಿದ್ದತೆಗಳು ಈಗಾಗಲೇ ನಡೆಯುತ್ತಿದೆ. ಗುರುವಾರ ಸಂಜೆವರೆಗೂ ಎಲ್ಲಾ ರೀತಿಯ ಸಿದ್ದತಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಈ ವೇಳೆ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post