ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಜಾತ್ಯಾತೀತ ಜನತಾದಳ ಪಕ್ಷದಿಂದ ಐತಿಹಾಸಿಕ ಮತಯಾಚನಾ ಯಾತ್ರೆ ಅದ್ದೂರಿಯಾಗಿ ನಡೆಯಿತು. ಬೃಹತ್ ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು, ಅಭಿಮಾನಿಗಳು, ಕಾರ್ಯಕರ್ತರು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ರವರನ್ನು ಭರ್ಜರಿಯಾಗಿ ಸ್ವಾಗತಿಸಿಕೊಂಡರು.
ಭಾಜಾ ಭಜಂತ್ರಿ, ಡೊಳ್ಳು, ಹಲಗೆ ಸೇರಿದಂತೆ ವಿವಿಧ ವಾದ್ಯಗಳು, ಭತ್ತದ ಹೊರೆ ಹೊತ್ತ ಮಹಿಳೆಯರು, ಆರತಿಯೊಂದಿಗೆ ಬಂದಿದ್ದ ಮಹಿಳೆಯರು ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಗ್ರಾಮ ಸಂಚಾರ ನಡೆಸಿದ ಶಾಸಕರು, ಜಾತ್ಯಾತೀತ ಜನತಾದಳ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.












Discussion about this post