ಕಲ್ಪ ಮೀಡಿಯಾ ಹೌಸ್ | ಬೀದರ್ |
ನೂತನವಾಗಿ ರಚನೆಯಾದ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ನಾಡಿನ ಒಳಿತಿಗಾಗಿ ನಾಡಿನ ರೈತರ, ಬಡವರ, ಶ್ರಮಿಕರ, ದಿನದಲಿತರ ಪರವಾಗಿ ಕೆಲಸ ಮಾಡುವ ಸರ್ಕಾರವಾಗಲಿ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ Bandeppa Khashempur ಶುಭ ಹಾರೈಸಿದ್ದಾರೆ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮತ್ತು ತಮ್ಮ ಜೀವನದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯರವರಿಗೆ Siddaramaiah ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ರವರಿಗೆ DKShivakumar ಹಾಗೂ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಿಗೆ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆ ತಿಳಿಸಿದ್ದಾರೆ.
“ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯರವರಿಗೆ ಮತ್ತು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ರವರಿಗೆ ಹಾಗೂ ಅವರೊಂದಿಗೆ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸರ್ವರಿಗೂ ಅಭಿನಂದನೆಗಳು.”
Also read: ಬಿ.ಕೆ. ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಿ: ಗಾಣಿಗ ಸಮುದಾಯ ಒತ್ತಾಯ
“ನೂತನವಾಗಿ ರಚನೆಯಾದ ಸರ್ಕಾರ ನಾಡಿನ ಒಳಿತಿಗಾಗಿ ನಾಡಿನ ರೈತರ, ಬಡವರ, ಶ್ರಮಿಕರ, ದಿನದಲಿತರ ಪರವಾಗಿ ಕೆಲಸ ಮಾಡುವ ಸರ್ಕಾರವಾಗಲಿ. ನಾಡಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಮಾಡಲಿ. ನೂತನ ಸರ್ಕಾರದ ಸರ್ವರಿಗೂ ಅಭಿನಂದನೆಗಳು.” ಎಂದು ಮಾಜಿ ಸಚಿವಬಂಡೆಪ್ಪ ಖಾಶೆಂಪುರ್ ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post