ಕಲ್ಪ ಮೀಡಿಯಾ ಹೌಸ್ | ಬೀದರ್ |
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ
ರಾಮೇಶ್ವರ ಕಫೆ ಬಾಂಬ್ ಸ್ಫೋಟ Rameshwaram Cafe Bomb Blast ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು.
Also read: ಈಶ್ವರವನದಲ್ಲಿ ವಿಶಿಷ್ಟ ಶಿವರಾತ್ರಿ ಉತ್ಸವ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಸಂಪನ್ನ
ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ
ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು.
ಅಂಬೇಡ್ಕರ್ ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ
ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post