ಕಲ್ಪ ಮೀಡಿಯಾ ಹೌಸ್ | ಬೀದರ್ |
ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬೀದರ್ ವಿಭಾಗದ ಕೆಎಮ್ಎಫ್ ನಿರ್ದೇಶಕರಾಗಿ ಮಾರುತಿ ಖಾಶೆಂಪುರ್ ಆಯ್ಕೆಯಾಗಿದ್ದಾರೆ.
ಸತತವಾಗಿ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಆಯ್ಕೆಯಾದ ಮಾರುತಿ ಖಾಶೆಂಪುರ್ ರವರು ತಮ್ಮ ಅಣ್ಣ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರನ್ನು Bandeppa Khashempur ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ನಿವಾಸದಲ್ಲಿ ಶನಿವಾರ ಬೆಳಗ್ಗೆ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎರಡನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಆಯ್ಕೆಯಾದ ಭೀಮರಾವ್ ಬಳತೆರವರು ಇದ್ದರು.

Also read: ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತಿದೆ: ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ಆಕ್ರೋಶ
ಬೀದರ್ ಜಿಲ್ಲೆಯಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸಹೋದರರಿಂದ ಜಿಲ್ಲೆಯಲ್ಲಿ ಹೈನುಗಾರಿಕೆ ಪ್ರಮಾಣ ಹೆಚ್ಚಳವಾಗಲಿ. ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ರೈತರಿಗೆ ಹೆಚ್ಚಿನ ಸೌಲಭ್ಯಗಳು ದೊರಕುವಂತಾಗಲಿ. ಹೆಚ್ಚಿನ ಪ್ರಮಾಣದ ಡೈರಿಗಳನ್ನು ಜಿಲ್ಲೆಯಲ್ಲಿ ಹುಟ್ಟಿಕೊಳ್ಳಲಿ ಎಂದು ಬಂಡೆಪ್ಪ ಖಾಶೆಂಪುರ್ ರವರು ಶುಭ ಹಾರೈಸಿದರು.












Discussion about this post