ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೀದರ್: ಇತ್ತೀಚೆಗೆ ಲಾರಿ – ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಾವಗಿ ಗ್ರಾಮದ ದಂಪತಿಗಳಾದ ಶೈಲಾನಿ ಮತ್ತು ಬಿ.ಪಾಷಾ ಅವರ ಮನೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ವೈಯಕ್ತಿಕ ನೆರವು ನೀಡಿ, ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಅವರು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರದಿಂದ ದೊರೆಯಬೇಕಾದ ನೆರವು ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ. ಕುಟುಂಬಸ್ಥರ ಜೀವನ ನಿರ್ವಾಹಣೆಗಾಗಿ ಸ್ವಂತ ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ ದೊರೆಯುವ ಲೋನ್ ಮಾಡಿಸಿಕೊಡುತ್ತೇನೆ. ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಜುಧೀನ್, ಹನುಮಂತ, ಸಿದ್ದು, ವಿಜಯಕುಮಾರ್, ಮೃತ ಕುಟುಂಬಸ್ಥರ ಸಂಬಂಧಿಕರು, ಜೆಡಿಎಸ್ ಪಕ್ಷದ ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post