No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಆಗ್ರಹ

kalpa News by kalpa News
December 27, 2022
in ಬೀದರ್
0
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕ ಖಾಶೆಂಪುರ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ನಮ್ಮ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಗತ್ಯವಾಗಿದ್ದು, ಕೂಡಲೇ ಕ್ಷೇತ್ರದೆಲ್ಲಡೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಿ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಸರ್ಕಾರವನ್ನು ಒತ್ತಾಯಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಮಂಗಳವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಏಳನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಪ್ರಶ್ನೋತ್ತರದ ವೇಳೆ ಜಲಜೀವನ್ ಮಿ?ನ್ ಯೋಜನೆಗೆ ಸಂಬಂಧಿಸಿದ ಪ್ರಶ್ನೆ ಕೇಳಿ ಅವರು ಮಾತನಾಡಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಮಾತ್ರ ಮಲ್ಟಿ ವಿಲೇಜ್ ಸ್ಕೀಮ್ ಜಾರಿಯಿದೆ. ಮನ್ನಾಎಖ್ಖೇಳ್ಳಿ ಭಾಗದ 31 ಹಳ್ಳಿಗಳು, ಬಗದಲ್ ಭಾಗದ 38 ಹಳ್ಳಿಗಳು ಸೇರಿದಂತೆ ಎಲ್ಲಾ ಹಳ್ಳಿಗಳಿಗೂ ಮಲ್ಟಿ ವಿಲೇಜ್ ಸ್ಕೀಮ್ ನಲ್ಲಿ ನೀರಿನ ಸೌಲಭ್ಯ ಒದಗಿಸಿಕೊಡಬೇಕು. ಶೀಘ್ರದಲ್ಲೇ ಕ್ಯಾಬಿನೆಟ್ ನಲ್ಲಿ ಪಾಸ್ ಮಾಡಿ ಯೋಜನೆ ಜಾರಿಗೊಳಿಸಬೇಕು.

ನಮ್ಮ ಭಾಗದಲ್ಲಿ ಬೋರ್ವೆಲ್ ಆಧಾರಿತವಾಗಿ ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಬೋರ್ವೆಲ್ ಗಳಲ್ಲಿ ಇವತ್ತು ಇರುವ ನೀರು ನಾಳೆ ಇರುವುದಿಲ್ಲ. ಹಾಗಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೆ ತರಬೇಕಾಗಿದೆ. ಮನ್ನಾಎಖ್ಖೇಳ್ಳಿ, ಬಗದಲ್ ಭಾಗಗಳ ಸುಮಾರು 69 ಹಳ್ಳಿಗಳು ಸೇರಿದಂತೆ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಜಾರಿಗೊಳಿಸಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಇದು ಕೇವಲ ನನ್ನ ಕ್ಷೇತ್ರದ ಸಮಸ್ಯೆಯಲ್ಲ, ರಾಜ್ಯದ ಸಮಸ್ಯೆ:
ಜಲಜೀವನ್ ಮಿಷನ್ ಯೋಜನೆ ಕೇವಲ ನನ್ನ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯಾದ್ಯಂತ ಸಮಸ್ಯೆಯಾಗಿದೆ. ನಾವು ಈ ಯೋಜನೆಯನ್ನು ಮೊದಲು ಸ್ವಾಗತಿಸಿದ್ದೇವು. ಕೇಂದ್ರ ಸರ್ಕಾರ ದುಡ್ಡು ಕೊಡ್ತಿದೆ. ಮನೆಮನೆಗೆ ನೀರು ಹೋಗ್ತಿವೆ ಎಂದು ಅಭಿಪ್ರಾಯ ಪಟ್ಟಿದ್ದೇವು. ಆದರೆ ಪ್ರಾಯೋಗಿಕವಾಗಿ ನೋಡಿದಾಗ ಸಮಸ್ಯೆಯಿದೆ. ನೀರು ನೀಡುವ ಸಲುವಾಗಿ ನಡುರಸ್ತೆಯನ್ನು ಅಗೆಯುತ್ತಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಬೇಸರ ವ್ಯಕ್ತಪಡಿಸಿದರು.

ನಾವು ಕಷ್ಟಪಟ್ಟು ರಸ್ತೆ ಮಾಡಿಸಿರುತ್ತೇವೆ:
ನಾವು ಕಷ್ಟಪಟ್ಟು ಯಾವ್ಯಾವೋದೋ ಯೋಜನೆಗಳಲ್ಲಿ ರಸ್ತೆಗಳನ್ನು ಮಾಡಿಸಿದ್ದೇವೆ. ಹಿಂದೆ ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾಗ ಸುವರ್ಣ ಗ್ರಾಮಗಳಲ್ಲಿ ಸಿಸಿ ರಸ್ತೆ ಮಾಡಿಸಿದ್ದೇವೆ. ಜೆಜೆಎಮ್ ನವರು ನಡುರಸ್ತೆಯಲ್ಲಿ 1.50 ಅಡಿ ರಸ್ತೆ ಕಟ್ ಮಾಡಿ, ಎಸ್ಡಿಪಿ ಪೈಪ್ ಹಾಕುತ್ತಿದ್ದಾರೆ. ಯಾವುದಾದರು ಒಂದು ದೊಡ್ಡ ಲಾರಿ ಬಂದರೆ ಪೈಪ್ ಗಳು ಕಂಪ್ಲಿಟ್ ಡ್ಯಾಮೇಜ್ ಹಾಗುತ್ತವೆ. ಅದರಿಂದ ಇದನ್ನು ಮರುಪರಿಶೀಲನೆ ಮಾಡಬೇಕಾಗಿದೆ. ಎಸ್ಡಿಪಿ ಬದಲಿಗೆ ಎಮ್‌ಎಸ್ ಪೈಪ್ ಹಾಕಿದರೆ ಶಾಶ್ವತ ಪರಿಹಾರ ಸಿಗುತ್ತದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಲಹೆ ನೀಡಿದರು.
ಉತ್ತರ ನೀಡಿ ಮಾತನಾಡಿದ ಸಚಿವ ಸಿ.ಸಿ ಪಾಟೀಲ್ ರವರು, ಬಂಡೆಪ್ಪ ಖಾಶೆಂಪುರ್ ರವರು ಒಳ್ಳೆಯ ಪ್ರಶ್ನೆ ಕೇಳಿದ್ದಾರೆ. ಇದು ಅವರ ಕ್ಷೇತ್ರಕ್ಕೆ ಮಾತ್ರ ಸಿಮಿತವಾದದ್ದಲ್ಲ. ರಾಜ್ಯಾದ್ಯಂತ ಇರುವ ಪ್ರಶ್ನೆಯಾಗಿದೆ. ಜೆಜೆಎಮ್ ನವರು ಕಟ್ ಮಾಡಿದ ರಸ್ತೆ ಸರಿಪಡಿಸುತ್ತಾರೆ. ಒಂದು ವೇಳೆ ರಸ್ತೆ ಸರಿ ಪಡಿಸದಿದ್ದಲ್ಲಿ ಅಂತವರ ಬಿಲ್ ನೀಡಬಾರದು ಎಂದು ಜಿಲ್ಲಾ ಪಂಚಾಯತಿ ಸಿಇಒರವರಿಗೆ ಸೂಚನೆ ನೀಡಲಾಗಿದೆ. ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಲು ಮತ್ತೇ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.

ಮರುಪ್ರಶ್ನೆ ಕೇಳಿ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಕಮಠಾಣಾ ವ್ಯಾಪ್ತಿಯ 18 ಹಳ್ಳಿಗಳಿಗೆ ಮಾತ್ರ ಬಹುಗ್ರಾಮ ಕುಡಿಯುವ ನೀರು ಸಿಗುತ್ತಿವೆ. ಇನ್ನುಳಿದಂತೆ ಮನ್ನಾಎಖ್ಖೇಳ್ಳಿಯ 31 ಹಳ್ಳಿಗಳು, ಬಗದಲ್ 38 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇನ್ನು ತಾಂತ್ರಿಕ ಹಂತದಲ್ಲಿವೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ. ಸರ್ಕಾರದಲ್ಲಿ ದುಡ್ಡು ಕೊಳೆಯುತ್ತಿದೆ. ಇಲಾಖೆಯ ಎಮ್.ಡಿ ಸೇರಿದಂತೆ ಅನೇಕ ಅಧಿಕಾರಿಗಳಿಗೆ ನಾನು ಸುಮಾರು ಸಲ ಮಾತನಾಡಿದ್ದೇನೆ. ಡಿಪಿಆರ್ ತರೆಸಿಕೊಂಡು 8-10 ದಿನಗಳಲ್ಲಿ ಕ್ಯಾಬಿನೆಟ್ ಗೆ ತಂದು ಕ್ಲಿಯರ್ ಮಾಡಿ ಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಯಾವುದೇ ರೀತಿಯಲ್ಲಿ ವಿಳಂಭವಾಗದಂತೆ ಆದಷ್ಟು ಬೇಗ ಈ ಯೋಜನೆ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಸಚಿವರು ತಿಳಿಸಿದರು. ಶಾಸಕರಾದ ರಮೇಶ್ ಕುಮಾರ್, ಹೆಚ್.ಕೆ ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡರವರು ಸೇರಿದಂತೆ ಅನೇಕರು ಶಾಸಕ ಬಂಡೆಪ್ಪ ಖಾಶೆಂಪುರ್ ರವರೊಟ್ಟಿಗೆ ಧ್ವನಿಗೂಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಒದಗಿಸಲು ಕರ್ನಾಟಕ ಸೂಕ್ತ ವ್ಯವಸ್ಥೆ ಹೊಂದಿದೆ: ಸಚಿವ ಅಶ್ವತ್ಥನಾರಾಯಣ

Next Post

ಬೆಂಕಿಗೆ ಆಹುತಿಯಾದ ಮೂರು ಖಾಸಗಿ ಬಸ್’ಗಳು: ಯಾರಿಗೆ ಸೇರಿದ ವಾಹನಗಳು?

kalpa News

kalpa News

Next Post
ಬೆಂಕಿಗೆ ಆಹುತಿಯಾದ ಮೂರು ಖಾಸಗಿ ಬಸ್’ಗಳು: ಯಾರಿಗೆ ಸೇರಿದ ವಾಹನಗಳು?

ಬೆಂಕಿಗೆ ಆಹುತಿಯಾದ ಮೂರು ಖಾಸಗಿ ಬಸ್'ಗಳು: ಯಾರಿಗೆ ಸೇರಿದ ವಾಹನಗಳು?

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL