ಕಲ್ಪ ಮೀಡಿಯಾ ಹೌಸ್ | ಬೀದರ್ |
ಖಾಶೆಂಪುರ್: ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದಲ್ಲಿ ನಡೆದ ದತ್ತ ಮಹಾರಾಜರ ಅವತಾರ ಪುರುಷ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿರವರ 6ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪಲ್ಲಕ್ಕಿ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಚಾಲನೆ ನೀಡಿದರು.
ಖಾಶೆಂಪುರ್ ಪಿ ಗ್ರಾಮದ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಖಾಶೆಂಪುರ್ ಪಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ವಿವಿಧ ಕಲಾ ತಂಡದವರು ಅದ್ದೂರಿಯಾಗಿ ಸ್ವಾಗತಿಸಿದರು. ಇದೇ ವೇಳೆ ಶಾಸಕರು ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿಗೆ ವಿಶೇಷ ಪೂಜೆ ಸಲ್ಲಿಸಿ ಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Also read: ಹೊಸ್ತಿಲ ಹುಣ್ಣಿಮೆ ಹಿನ್ನೆಲೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ












Discussion about this post