ಕಲ್ಪ ಮೀಡಿಯಾ ಹೌಸ್ | ಬೀದರ್ |
ಬಿಜೆಪಿ, ಕಾಂಗ್ರೆಸ್ ಪಕ್ಷಗಳು ನಾಡಿನ ರೈತರ, ಶ್ರಮಿಕರ, ಬಡವರ ಪರವಾಗಿ ಎಂದು ಕೂಡ ಕೆಲಸ ಮಾಡಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ನಾವು ನಾಡಿನ ಬಡವರ, ರೈತರ, ಶ್ರಮಿಕರ ಪರವಾಗಿ ನಿರಂತರವಾಗಿ ಕೆಲಸ ಮಾಡಿದ್ದೇವೆ ಎಂದು ಹೇಳುವ ಮೂಲಕ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು Bandeppa Khashempur ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಸಿಡಿದೆದ್ದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬುಧವಾರ ಸಂಜೆ ಮತಯಾಚನೆ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ ಐದು ವರ್ಷಗಳ ಕಾಲ ಅಧಿಕಾರ ನಡೆಸಿದೆ. ಬಿಜೆಪಿ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿದೆ ಆದರೆ ಅವರು ಯಾವುದೇ ಮಹತ್ವದ ಕೆಲಸಗಳನ್ನು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಅಧಿಕಾರಕ್ಕೆ ಬಂದ ಕೂಡಲೇ, ಕೂಲಿ ಕಾರ್ಮಿಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ನೀಡುತ್ತೇವೆ. ರೈತರಿಗೆ ಕೃಷಿ ಕೆಲಸ ಕಾರ್ಯಗಳ ಖರ್ಚಿಗಾಗಿ ತಿಂಗಳಿಗೆ ಎಕರೆಗೆ ಹತ್ತು ಸಾವಿರ ರೂ. ಹತ್ತು ಎಕರೆಯವರೆಗೂ ನೀಡುತ್ತೇವೆ. ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ ವಿದ್ಯುತ್ ಸೌಲಭ್ಯ ನೀಡುತ್ತೇವೆ. ವೃದ್ಧಾಪ್ಯ, ವಿಧವಾ ವೇತನ ಸೇರಿದಂತೆ ವಿವಿಧ ಯೋಜನೆಗಳ ಸಹಾಯಧನ ಐದು ಸಾವಿರ ರೂ.ಗಳವರೆಗೆ ಹೆಚ್ಚಿಸುವ ಕೆಲಸ ಮಾಡುತ್ತೇವೆ. ಇನ್ನೂ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ.
Also read: ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ
ಎಲ್ಲಾ ಪಕ್ಷದವರು ಚುನಾವಣೆ ಸಂದರ್ಭದಲ್ಲಿ ಜನರಿಗೆ ಆಶ್ವಾಸನೆಗಳನ್ನು ನೀಡುತ್ತಾರೆ. ನಮ್ಮ ಕ್ಷೇತ್ರದಲ್ಲಿ ಶಾಶ್ವತವಾಗಿ ನಿಂತು ಕೆಲಸ ಮಾಡುವವರು ಕಡಿಮೆಯಿದ್ದಾರೆ. ಓಡಿ ಹೋಗೋ ಮಂದಿ ಜಾಸ್ತಿಯಾಗಿದ್ದಾರೆ. ಕ್ಷೇತ್ರದ ಜನರು ಓಡಿ ಹೋಗೋ ಮಂದಿಗೆ ಅವಕಾಶ ನೀಡಬಾರದು. ನಿರಂತರವಾಗಿ ನಿಮ್ಮೊಂದಿಗೆ ಇರುವ ನನಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮತದಾರರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post