ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ನಿಜಾಂಪೂರ ಗ್ರಾಮಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ ಗ್ರಾಮ ವೀಕ್ಷಣೆ ನಡೆಸಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು.
ನಿಜಾಂಪೂರ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಶಾಸಕರು, ಗ್ರಾಮದ ವಿವಿಧ ಏರಿಯಾಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮಾತನಾಡಿ, ಸಮಸ್ಯೆಗಳ ಮಾಹಿತಿ ಪಡೆದರು. ಅಧಿಕಾರಿಗಳೊಂದಿಗೆ ಮಾತನಾಡಿ, ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು.
ಇದೇ ವೇಳೆ ಮಾತನಾಡಿದ ಅವರು, ನಾನು ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತಾ ಬಂದಿದ್ದೇನೆ. ಕ್ಷೇತ್ರದಲ್ಲೆಡೆ ಗ್ರಾಮ ಸಂಚಾರ ನಡೆಸಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದೇನೆ. ಈಗ ನಿಜಾಂಪೂರ ಗ್ರಾಮದ ಅನೇಕ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಿರಿ. ಅವುಗಳನ್ನು ಪರಿಹರಿಸುವ ಕೆಲಸವನ್ನು ಮಾಡುತ್ತೇನೆ ಎಂದರು.
ಗ್ರಾಮದ ಹಿರಿಯ ನಾಗರಿಕರು, ಮಹಿಳೆಯರನ್ನು ಮಾತನಾಡಿಸಿ, ನಿಮ್ಮ ಸಮಸ್ಯೆಗಳೇನಾದರು ಇದ್ದರೆ ತಿಳಿಸಿ ಅವುಗಳನ್ನು ಕೂಡಲೇ ಪರಿಹರಿಸುವ ಕೆಲಸ ಮಾಡುತ್ತೇನೆ. ಗ್ರಾಮದ ರಸ್ತೆ, ಚರಂಡಿ, ನೀರಿನ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸುವ ಕೆಲಸ ಮಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಗುರುನಾಥ ಬಿರಾದಾರ, ಶಿವಾನಂದ ಕುಂಬಾರ, ರಿಯಾಜ್, ಸಂತೋ?, ರಾಜಪ್ಪ, ಯೇಸುದಾಸ್, ಸಂಜಯ ಪಾಟೀಲ್, ಸಂಗಶೆಟ್ಟಿ ಬಿರಾದಾರ, ರಾಜಕುಮಾರ ಸೇರಿದಂತೆ ಅನೇಕರಿದ್ದರು. ಇದೇ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹಜ್ರಗಿ, ಕೋಳಾರ ಕೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಾಳಾದ ರಸ್ತೆ, ಕಟ್ಟಡಗಳನ್ನು ವೀಕ್ಷಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post