ಕಲ್ಪ ಮೀಡಿಯಾ ಹೌಸ್ | ಬೀದರ್ |
ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು Bandeppa Khashempur ಭಾನುವಾರ ಬೆಳಗ್ಗೆ ಕ್ಷೇತ್ರದ ಬರಿದಾಬಾದ್, ಬುದೇರಾ, ಚಟ್ನಳ್ಳಿ, ಖಾಜಾನಗರ, ಹೊನ್ನಡ್ಡಿ ಸೇರಿದಂತೆ ವಿವಿಧೆಡೆ ನಡೆಸಿದ ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ಭಾರೀ ಜನಬೆಂಬಲದೊಂದಿಗೆ ಯಶಸ್ವಿಯಾಗಿ ನಡೆಯಿತು.
ಮನೆಮನೆಗೆ ತೆರಳಿ ಮತಯಾಚಿಸಿದ ಜೆಡಿಎಸ್ ನಾಯಕ:
ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿದ ಪ್ರತಿಯೊಂದು ಗ್ರಾಮದಲ್ಲೂ ಗ್ರಾಮ ಸಂಚಾರ ನಡೆಸಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು. ನಮ್ಮದು ಪ್ರಾದೇಶಿಕ ಪಕ್ಷವಾಗಿದ್ದು, ನಾಡಿನ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅಧಿಕಾರಕ್ಕೆ ಬಂದ ಕೂಡಲೇ ಇನ್ನೂ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ. ನಮಗೆ ಮತ ನೀಡಿ ಎಂದು ಮನವಿ ಮಾಡಿದರು.

ಹೊನ್ನಡ್ಡಿಯಲ್ಲಿ ಜೆಡಿಎಸ್ ಸೇರಿದ ಪ್ರಮುಖರು:
ಶಾಸಕ ಬಂಡೆಪ್ಪ ಖಾಶೆಂಪುರ್ ರವರ ಚುನಾವಣಾ ಪ್ರಚಾರದ ವೇಳೆಯಲ್ಲಿ ಕ್ಷೇತ್ರದ ಹೊನ್ನಡ್ಡಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಅಮರ್ ತರನಳ್ಳಿ ನೇತೃತ್ವದಲ್ಲಿ ಅನೇಕರು ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ರವಿ ತರನಳ್ಳಿ, ವಿಜ್ಞೇಶ್ವರ್ ತರನಳ್ಳಿ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post