ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಕುತ್ತಾಬಾದ್ ಗ್ರಾಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ನಿರ್ಮಿತಿ ಕೇಂದ್ರದ ಸಹಯೋಗದೊಂದಿಗೆ ಐವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗ್ರಾಮದ ಪರಿಶಿಷ್ಟ ವರ್ಗದ ಓಣಿಯ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ನೆರವೇರಿಸಿದರು.

ಗ್ರಾಮದ ಜನರು ಇದೀಗ ಅನೇಕ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಅವುಗಳನ್ನು ಪರಿಹರಿಸುವ ಕೆಲಸವನ್ನು ಆದಷ್ಟು ಶೀಘ್ರವಾಗಿ ಮಾಡುತ್ತೇನೆ. ಎಲ್ಲರೂ ಒಗಟ್ಟಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಗೊಳಿಸುವ ಕೆಲಸ ಮಾಡಬೇಕು. ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆಧ್ಯತೆ ನೀಡಬೇಕು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿವೃದ್ಧಿ ವಿಷಯವಾಗಿ ಚರ್ಚಿಸುತ್ತೇನೆ. ರಸ್ತೆ, ಚರಂಡಿ ನಿರ್ಮಾಣ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಇನ್ನೂ ಅನೇಕ ಕೆಲಸಗಳು ಆಗಬೇಕಾಗಿದ್ದು ಹಂತ ಹಂತವಾಗಿ ಎಲ್ಲಾ ಕೆಲಸಗಳನ್ನು ಮಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.
ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿ ಮಠಪತಿ, ಲಕ್ಷ್ಮೀಭಾಯಿ ತುಂಗಾ, ಅನಿತಾ ಪಂಡಿತ್, ಮಲ್ಲಯ್ಯ ಸ್ವಾಮಿ, ತೇಜಮ್ಮ ಈಶ್ವರಪ್ಪ, ಗಾಳೆಪ್ಪ ತಮಗೊಂಡ, ತುಕ್ಕರಾಮ ಬಾಲದೊಡ್ಡಿ, ಶಂಕರ್ ದಳಪತಿ, ಹುಸ್ಮಾನ್, ಸುನೀಲ್ ಕುಮಾರ್ ಮೇಕ್ರೆ, ಅಶೋಕ ಕೋಟೆಭಾವಿ, ನಾಗಮ್ಮ, ಮಾರುತಿ, ಸಂಗಮ್ಮ, ಜಗನ್, ತುಕ್ಕಪ್ಪ, ರವಿ, ಅಶೋಕ ತಮಗೊಂಡ, ಶ್ರೀಕಾಂತ್, ಗೌತಮ್ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post