ಕಲ್ಪ ಮೀಡಿಯಾ ಹೌಸ್
ಬೀದರ್: ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಆಣದೂರು ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷ, ಸದಸ್ಯರೊಂದಿಗೆ ಸಭೆ ನಡೆಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸೋಮವಾರ ಬೆಳಗ್ಗೆ ಆಣದೂರು ಗ್ರಾಮ ಪಂಚಾಯಿತಿ ಕಛೇರಿಗೆ ಭೇಟಿ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್, ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಆಗಬೇಕಾಗಿರುವ ಕೆಲಸ ಕಾರ್ಯಗಳು, ವಿವಿಧ ಯೋಜನೆಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡುವಂತೆ ಪಿಡಿಒ ಮತ್ತು ಅಧ್ಯಕ್ಷ, ಸದಸ್ಯರಿಗೆ ತಿಳಿಸಿದರು.
ವಿವಿಧ ಗ್ರಾಮಗಳ ರಸ್ತೆ ಸುಧಾರಣೆ, ಕುಡಿಯುವ ನೀರಿನ ಸಮಸ್ಯೆಗಳನ್ನು ಆದಷ್ಟು ಬೇಗ ಸರಿಪಡಿಸಬೇಕು. ಆ ಸಂಬಂಧ ನನ್ನ ಕ್ಷೇತ್ರ ವ್ಯಾಪ್ತಿಯ ಎರಡು ತಾಲೂಕು ಪಂಚಾಯಿತಿಯ ಇಒಗಳೊಂದಿಗೆ ಸಭೆ ನಡೆಸುತ್ತೇನೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ನಿಮ್ಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಯ ಪಟ್ಟಿಯನ್ನು ನನಗೆ ಕೊಡಿ. ಆದಷ್ಟು ಬೇಗ ಅವುಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆ.
ಜೆಜೆಎಂನಲ್ಲಿ ಎಷ್ಟು ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಿರಿ? ಇನ್ನೂ ಎಷ್ಟು ಕಲ್ಪಿಸಬೇಕಾಗಿದೆ. ಎಂಬ ಮಾಹಿತಿ ನಿಮಗೆ ಇದೆಯಾ? ಸಿಸಿ ರೋಡ್ ಗಳು ಎಷ್ಟು ಬಾಕಿ ಇವೆ. ಮಣ್ಣಿನ ರಸ್ತೆಗಳು ಎಷ್ಟು ಬಾಕಿ ಇವೆ. ಆಯುಷ್ಮಾನ್ ಭಾರತ ಕಾರ್ಡ್, ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ನಿಮ್ಮ ಗ್ರಾಮ ಪಂಚಾಯತಿಗಳಲ್ಲಿ ಯಾವ್ಯಾವು ಎಷ್ಟೇಷ್ಟು ಇದ್ದಾವೆ. ಅವುಗಳ ಮಾಹಿತಿ ನಿಮಗೆ ಇದೆಯೇ? ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಮೃತ್, ಅಧ್ಯಕ್ಷ, ಸದಸ್ಯರನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಪ್ರಶ್ನಿಸಿ, ಇವೆಲ್ಲವುಗಳ ಬಗ್ಗೆ ಮಾಹಿತಿ ಇಟ್ಟುಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗಾಂಧಿ ಗಂಜ್ ಕೋಪರೇಟಿವ್ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ್ ಪಾಟೀಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಮೃತ್, ಅಧ್ಯಕ್ಷರು, ಸದಸ್ಯರು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post