ಕಲ್ಪ ಮೀಡಿಯಾ ಹೌಸ್
ಬೀದರ್: ಕೊರೊನಾ ವೈರಸ್ ಹಾವಳಿಯಿಂದಾಗಿ ಗ್ರಾಮೀಣ ಭಾಗದ ಜನರು ಬಹಳಷ್ಟು ಸಂಕಷ್ಟಕ್ಕೆ ಸಿಲುಕಿದ್ದು , ನರೇಗಾದ ಮೂಲಕ ಸಂಕಷ್ಟಕ್ಕೆ ಸಿಲುಕಿದ ಗ್ರಾಮೀಣ ಭಾಗದ ಜನರಿಗೆ ನೆರವಾಗಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ತಾಲೂಕು ಪಂಚಾಯತಿ ಇಒರವರಿಗೆ ಸೂಚಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಉಡಮನಹಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಕಛೇರಿ ಆವರಣದಲ್ಲಿ ಗುರುವಾರ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಾನು ಉಡಮನಹಳ್ಳಿ ಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಜಮೀನು ಒಂದರಲ್ಲೇ ಬಹಳಷ್ಟು ಹೆಣ್ಣು ಮಕ್ಕಳು ಕೆಲಸ ಮಾಡುತ್ತಿದ್ದರು. ಅವರನ್ನು ಮಾತನಾಡಿಸುತ್ತಿದ್ದ ಸಂದರ್ಭದಲ್ಲಿ ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಉದ್ಯೋಗ ಖಾತ್ರಿ ಕೆಲಸ ಸರಿಯಾಗಿ ನೀಡುತ್ತಿಲ್ಲ ಎಂಬ ಬೇಸರವನ್ನು ಆ ಹೆಣ್ಣು ಮಕ್ಕಳು ವ್ಯಕ್ತ ಪಡಿಸಿದ್ದಾರೆ.
ಗ್ರಾಮೀಣ ಭಾಗದ ಜನರ ಸಂಕ?ದ ಸಂದರ್ಭದಲ್ಲಿ ನರೇಗಾ ನೆರವಾಗುತ್ತದೆ. ಆಗಾಗಿ ಇಲ್ಲಿನ ಪಿಡಿಒ ವಿಜಯಕುಮಾರ್ ಹಾಗೂ ತಾಲೂಕು ಪಂಚಾಯತಿ ಇಒ ಶಂಕರ ಕನಕರವರು ಹೆಚ್ಚಿನ ಗಮನಹರಿಸಬೇಕು. ಕೆಲಸ ಮಾಡಿದವರಿಗೆ ಸರಿಯಾದ ಸಮಯಕ್ಕೆ ಕೂಲಿ ಹಣ ಜಮಾ ಆಗುವಂತೆ ನೋಡಿಕೊಳ್ಳಬೇಕು. ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೆಲಸ ನೀಡಬೇಕು. ಉದ್ಯೋಗ ಖಾತ್ರಿ ಕೆಲಸ ನಿರಂತರವಾಗಿ ಇರುವಂತೆ ನೋಡಿಕೊಳ್ಳಬೇಕು.
ರೈತರ ಜಮೀನುಗಳ ಸಂಪರ್ಕ ರಸ್ತೆಗಳು, ಶುದ್ಧ ಕುಡಿಯುವ ನೀರಿನ ಘಟಕ, ರಸ್ತೆಯ ಮೇಲಿನ ಕಂಬಗಳನ್ನು ತೆರವುಗೊಳಿಸುವುದು, ವೃದ್ಧಾಪ್ಯ ವೇತನ, ಕೊರೊನಾ ವ್ಯಾಕ್ಸಿನೇಷನ್ ಸೇರಿದಂತೆ ಅನೇಕ ವಿ?ಯಗಳ ಕುರಿತು ಸಭೆಯಲ್ಲಿ ಚರ್ಚಿಸಿ ಕೂಡಲೇ ಪರಿಹಾರ ಕಂಡುಕೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಚಿಟಗುಪ್ಪಾ ತಾಲೂಕು ಪಂಚಾಯತಿ ಇಒ ಶಂಕರ ಕನಕ, ಚಿಟಗುಪ್ಪಾ ತಹಶಿಲ್ದಾರ ಮಹಮ್ಮದ್ ಝೀಯಾವುದೀನ್, ಲ್ಯಾಂಡ್ ಆರ್ಮಿ ಡಿಡಿ ರಘುನಾಥ್, ಪಿಡಬ್ಲೂಡಿ ಇಇ ಶಶಿಧರ್ ಪಾಟೀಲ್, ಪಿಆರ್‌ಇ ಎಇಇ ವಾಮನ್ ರಾವ್ ಜಾದಾವ್, ಮುಖಂಡರಾದ ಸಂತೋಷ್ ರಾಸೂರು, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post