No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಜ.5ರಿಂದ 8ರವರೆಗೆ ಬೀದರ್ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ

ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಭಾಗಿ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 3, 2023
in ಬೀದರ್
0
ಜ.5ರಿಂದ 8ರವರೆಗೆ ಬೀದರ್ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಜನವರಿ 5ರಿಂದ 8ನೇ ತಾರೀಖಿನವರೆಗೆ ಬೀದರ್ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದಿಂದ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿದಂತೆ ಜೆಡಿಎಸ್ ಪಕ್ಷದ ಹಿರಿಯ ನಾಯಕರು ಪಾಲ್ಗೊಳ್ಳುತ್ತಿದ್ದಾರೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್  ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ ೫ ರಿಂದ 8ನೇ ತಾರೀಖಿನವರೆಗೆ ಕುಮಾರಸ್ವಾಮಿರವರು ಬೀದರ್ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಜ.5ರಂದು ಬೀದರ್ ಉತ್ತರ, 6ರಂದು ಬೀದರ್ ದಕ್ಷಿಣ, 7ರಂದು ಹುಮಾನಾಬಾದ್, 8ರಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬೃಹತ್ ಮಟ್ಟದಲ್ಲಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ನಡೆಯುತ್ತದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಆ ದಿನದ ಸಂಜೆ ಸಮಯದಲ್ಲಿ ದೊಡ್ಡಮಟ್ಟದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ರಾತ್ರಿ ಕ್ಷೇತ್ರದ ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ದಿನವಿಡೀ ಪೂರ್ವ ನಿಗದಿ ಪಡಿಸಲಾಗುವ ಹಳ್ಳಿಗಳ ಮಾರ್ಗವಾಗಿ ಪಂಚರತ್ನ ರಥಯಾತ್ರೆ ಸಾಗುತ್ತದೆ.
ಎಲ್ಲಾ ಕಡೆಗಳಲ್ಲಿ ದೊಡ್ಡಮಟ್ಟದ ವಿವಿಧ ರೀತಿಯ ಹಾರಗಳೊಂದಿಗೆ ಸನ್ಮಾನಿಸಲು ಅಭಿಮಾನಿಗಳು, ಕಾರ್ಯಕರ್ತರು ಈಗಾಗಲೇ ತಯಾರಿ ನಡೆಸಿದ್ದಾರೆ. ಕಾರ್ಯಕ್ರಮ ಯಶಸ್ವಿಗಾಗಿ ಈಗಾಗಲೇ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಎಲ್ಲಾ ಕಡೆಗಳಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿವೆ ಎಂದು ತಿಳಿಸಿದರು.

ಕಾಂಗ್ರೆಸ್, ಬಿಜೆಪಿಯವ್ರು ರಾಜ್ಯದ ಜನತೆಗೆ ಯಾವುದೇ ಸ್ಪಷ್ಟ ಸಂದೇಶ ನೀಡಿಲ್ಲ:
ಕಾಂಗ್ರೆಸ್ ನವರು ಭಾರತ್ ಜೋಡೊ ಕಾರ್ಯಕ್ರಮ ಮಾಡಿದ್ದಾರೆ. ಆದರೇ ತಾವು ಅಧಿಕಾರಕ್ಕೆ ಬಂದರೇ ಏನು ಮಾಡುತ್ತೇವೆ ಎಂಬ ಸ್ಪಷ್ಟ ಸಂದೇಶ ರಾಜ್ಯದ ಜನತೆಗೆ ಅವರು ನೀಡಿಲ್ಲ. ಬಿಜೆಪಿಯವ್ರು ಆಡಳಿತದಲ್ಲಿದ್ದಾರೆ. ಜನಸಂಕಲ್ಪ ಯಾತ್ರೆ ಮಾಡಿದ್ದಾರೆ. ಆದರೇ ಅವರು ಕೂಡ ಯಾವುದೇ ಸ್ಪಷ್ಟ ಸಂದೇಶ ನೀಡಿಲ್ಲ. ಎರಡು ಪಕ್ಷದವರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದಾರೆ.
ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್ ನೆಲೆ ಉಳಿಸಿಕೊಂಡು ಬಂದಿದೆ:
ನಮ್ಮ ಜಾತ್ಯಾತೀತ ಜನತಾದಳ ಪಕ್ಷ ಒಂದು ಪ್ರಾದೇಶಿಕ ಪಕ್ಷವಾಗಿ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನಪರ ಕೆಲಸಗಳನ್ನು ಮಾಡುತ್ತಾ ನೆಲೆ ಉಳಿಸಿಕೊಂಡು ಬಂದಿದೆ. ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ರಾಜ್ಯಕ್ಕೆ ನೀರಾವರಿ ಯೋಜನೆಗಳನ್ನು ನೀಡಿದ್ದಾರೆ. ಅದರಂತೆಯೇ ಕುಮಾರಸ್ವಾಮಿರವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಅನೇಕ ಜನಪ್ರಿಯ, ಜನಪರ ಕಾರ್ಯಕ್ರಮಗಳನ್ನು ತಂದಿದ್ದಾರೆ.

2023ರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದೇವೆ:
ನಾವು 2023ರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದೇವೆ. ನಾವು ಜನರಿಗೆ ಯಾವ ರೀತಿಯಲ್ಲಿ ಉತ್ತಮ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗುತ್ತದೆ. ಯಾವ ರೀತಿಯಲ್ಲಿ ಜನರ ಮಧ್ಯದಲ್ಲಿ ಹೋಗಲು ಸಾಧ್ಯವಾಗುತ್ತದೆ ಆ ರೀತಿಯಲ್ಲಿ ಜನಪರವಾಗಿ, ಜನರ ಮುಂದೆ ಹೋಗುತ್ತಿದ್ದೇವೆ. ನವೆಂಬರ್ 18ರಿಂದ ಪಂಚರತ್ನ ರಥಯಾತ್ರೆ ಆರಂಭವಾಗಿದೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಜ.5ರಿಂದ ಬೀದರ್ ನಿಂದಲೇ ಆರಂಭವಾಗಲಿದೆ.
ಪಂಚರತ್ನದ ಗುರಿಗಳು:
ನಮ್ಮ ಜೆಡಿಎಸ್ ಪಕ್ಷದಿಂದ ಪಂಚರತ್ನ ರಥಯಾತ್ರೆ ಎಂಬ ಕಾರ್ಯಕ್ರಮದ ಮೂಲಕ ನಾಡಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ನಾಡಿನ ಜನತೆಗೆ ಅತ್ಯುತ್ತಮ ಆರೋಗ್ಯ ಸೇವೆ, ನಾಡಿನ ರೈತರಿಗೆ ಅತ್ಯುತ್ತಮ ಯೋಜನೆಗಳು, ಯುವ ಜನರಿಗೆ ಉದ್ಯೋಗ ಅವಕಾಶಗಳು, ಬಡಜನರಿಗೆ ವಸತಿ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪಣತೊಟ್ಟಿದ್ದೇವೆ. ನಮ್ಮನ್ನು ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ತಂದರೆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಹಾಗಾಗಿ 2023ರ ಚುನಾವಣೆಯಲ್ಲಿ ನಮಗೆ ಅಧಿಕಾರ ನೀಡುವಂತೆ ರಾಜ್ಯದ ಜನತೆಗೆ ಮನವಿ ಮಾಡುತ್ತಿದ್ದೇವೆ.

ಪಂಚರತ್ನ ರಥಯಾತ್ರೆ ಮಾರ್ಗಗಳಿವು:
ಜನವರಿ 5ರಂದು ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಬೀದರ್ ನಗರದ ಗಣೇಶ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ, ಜನವಾಡದಲ್ಲಿ ಗ್ರಾಮ ವಾಸ್ತವ್ಯ. 6ರಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಮ್ಲಾಪುರ್ ದಿಂದ ರಥಯಾತ್ರೆ ಆರಂಭವಾಗಿ ಮನ್ನಳಿ, ಬೇಮಳಖೇಡ, ಚಾಂಗಲೇರಾ ಮೂಲಕ ಮನ್ನಾಎಖೇಳ್ಳಿಗೆ ತಲುಪಿ ಅಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ. ನಿರ್ಣಾ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಯಲಿದೆ.
7ರಂದು ಹುಮಾನಾಬಾದ್ ಕ್ಷೇತ್ರದಲ್ಲಿ ರಥಯಾತ್ರೆ ಸಾಗುತ್ತದೆ. ಹುಮಾನಾಬಾದ್ ನ ತೇರು ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯುತ್ತದೆ. 8ರಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ರಥಯಾತ್ರೆ ಸಾಗಲಿದ್ದು, ಬಸವಕಲ್ಯಾಣದ ಅಕ್ಕಮಹಾದೇವಿ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ, ಮೋಕಂಡಿ ಗ್ರಾಮದಲ್ಲಿ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಬಳಿಕ ಕಲಬುರಗಿ ಜಿಲ್ಲೆಗೆ ರಥಯಾತ್ರೆ ಸಾಗಲಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮಾಧ್ಯಮಗೋಷ್ಠಿಯ ಮೂಲಕ ರಥಯಾತ್ರೆಯ ಮಾಹಿತಿ ಹಂಚಿಕೊಂಡರು.

ಮನೆಮನೆಗೆ ಪಂಚರತ್ನ ಮುಂದಿನ ದಿನಗಳಲ್ಲಿ ನಡೆಯಲಿದೆ:
ಪಂಚರತ್ನ ರಥಯಾತ್ರೆ ಕಾರ್ಯಕ್ರಮದ ನಂತರ ಮುಂದಿನ ದಿನಗಳಲ್ಲಿ ಮನೆಮನೆಗೆ ಪಂಚರತ್ನ ಎಂಬ ಕಾರ್ಯಕ್ರಮ ನಡೆಲಿದೆ. ಕುಮಾರಸ್ವಾಮಿರವರ ನಾಲ್ಕು ದಿನದ ಬೀದರ್ ಜಿಲ್ಲೆಯ ಪ್ರವಾಸವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲೆಯ ಜನತೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಕಾರಂಜಾ ರೈತರ ಪರವಾಗಿ ನಾವಿದ್ದೇವೆ:
ಕಾರಂಜಾ ಸಂತ್ರಸ್ತ ರೈತರ ಪರವಾಗಿ ನಾವಿದ್ದೇವೆ. ನಾನು ಅವರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೇನೆ. ನಮ್ಮೊಂದಿಗೆ ಅವರು ನಿರಂತರವಾಗಿ ಸಂಪರ್ಕದಲ್ಲಿ ಇದ್ದಾರೆ. ಟೈಮ್ ಮಾಡಿಕೊಂಡು ಕುಮಾರಣ್ಣರವರನ್ನು ಕಾರಂಜಾ ಸಂತ್ರಸ್ತರ ಹೋರಾಟದ ಸ್ಥಳಕ್ಕೆ ಕರೆದುಕೊಂಡು ಹೋಗಿ ಮನವಿ ಸ್ವೀಕರಿಸುತ್ತೇವೆ. ಈ ಸರ್ಕಾರ ಕಾರಂಜಾ ಸಂತ್ರಸ್ತ ಪರವಾಗಿಲ್ಲ. ಮುಂದಿನ ದಿನಗಳಲ್ಲಿ ನಾವು ಅಧಿಕಾರಕ್ಕೆ ಬಂದಾಗ ಕಾರಂಜಾ ಸಂತ್ರಸ್ತ ರೈತರ ಬೇಡಿಕೆಗಳನ್ನು ಈಡೇರಿಸುತ್ತೇವೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್, ಪಕ್ಷದ ಪ್ರಮುಖರಾದ ಅಶೋಕ್ ಕುಮಾರ್ ಕರಂಜೆ, ಮಾರುತಿ ಬೌದ್ಧೆ, ಸಜ್ಜದ್ ಸಾಹೇಬ್, ಅಸದುದ್ದಿನ್ ಸಾಹೇಬ್, ರಾಜಶೇಖರ ಜವಳೆ, ಅಶೋಕ್ ಕೊಡಗೆ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್
Share197Tweet123Send
Previous Post

ಹೊಳೆಹಟ್ಟಿ ಗ್ರಾಮದಲ್ಲಿ ನೂತನ ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ

Next Post

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಅಪ್ಪಳಿಸಿದ ಟ್ರಕ್-ಬಸ್: ಒಂದೇ ಕುಟುಂಬದ ಐವರು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಅಪ್ಪಳಿಸಿದ ಟ್ರಕ್-ಬಸ್: ಒಂದೇ ಕುಟುಂಬದ ಐವರು ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL