ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗೋರಾ ಗ್ರಾಮದಲ್ಲಿ ಶ್ರೀ ಭೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ್ Bandeppa Khashempur ಪಾಲ್ಗೊಂಡು, ಶ್ರೀ ಭೀರಲಿಂಶ್ವರ ದೇವರ ದರ್ಶನ ಪಡೆದರು. ದೇವಸ್ಥಾನ ಸಮಿತಿಯ ಸದಸ್ಯರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
ಬಳಿಕ ಪಕ್ಷದ ಕಾರ್ಯಕರ್ತ ಅಭಿಲಾಷ್ ಸಿಂಧೆರವರು ನೂತನವಾಗಿ ನಿರ್ಮಿಸುತ್ತಿರುವ ಮನೆಗೆ ಭೇಟಿ ನೀಡಿದರು. ನಂತರ ಶ್ರಾವಣ ಸೋಮವಾರದ ಪ್ರಯುಕ್ತವಾಗಿ ಬೀದರ್ ನಗರದ ಸುಕ್ಷೇತ್ರ ಪಾಪನಾಶ ದೇವಸ್ಥಾನ ಮತ್ತು ಶ್ರೀ ಶಿರಡಿ ಸಾಯಿಬಾಬಾ ಗವಿಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ದೇವಸ್ಥಾನ ಸಮಿತಿಯವರು, ಮುಖಂಡರು ಸೇರಿದಂತೆ ಅನೇಕರಿದ್ದರು.
Also read: ಶೃಂಗೇರಿ ಶ್ರೀಗಳ ವರ್ಧಂತಿ: ಅರ್ಥಪೂರ್ಣವಾಗಿ ಆಚರಿಸಿದ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಟ್ಟಾ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಸರಸ್ವತಿ ಅವರನ್ನು ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ್ ಸನ್ಮಾನಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post