ಕಲ್ಪ ಮೀಡಿಯಾ ಹೌಸ್ | ಬೀದರ್ ದಕ್ಷಿಣ |
ಪ್ರತಿ ವಿದ್ಯಾರ್ಥಿಗಳೂ ತಮ್ಮ ಪೋಷಕರ ತ್ಯಾಗವನ್ನು ಅರಿತು ಉತ್ತಮವಾಗಿ ಓದಿ, ಸಾಧನೆ ಮಾಡಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ MLA Dr. Shilendra Beldale ಕರೆ ನೀಡಿದರು.
ಬೀದರ್ ನಗರದ ಪ್ರತಾಪನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳ ಸುಮಾರು 19 ವಿದ್ಯಾರ್ಥಿಗಳಿಗೆ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿದರು.

Also read: 70 ವರ್ಷದ ದೋಷ ಮೋದಿಯಿಂದ ಕೇವಲ 10 ವರ್ಷದಲ್ಲಿ ಪರಿಹಾರ: ಅಮಿತ್ ಶಾ
ಕಟ್ಟಡ ಕಾರ್ಮಿಕರು ಶ್ರಮಜೀವಿಗಳು. ಆದರೂ ಎಷ್ಟೇ ಕಷ್ಟವಾದರೂ ಮಕ್ಕಳಿಗೆ ಶಿP್ಷÀಣ ಕೊಡಿಸುತ್ತಾರೆ. ಆದ್ದರಿಂದ ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ವಿದ್ಯಾರ್ಥಿಗಳು ಬಳಸಿಕೊಂಡು ಸಾಧನೆ ಮಾಡಬೇಕು ಎಂದರು. ಪಾಲಕರು ತಮಗೆ ಎಷ್ಟೇ ನೋವಿದ್ದರೂ ಮಕ್ಕಳಿಗಾಗಿಯೇ ಬದುಕುತ್ತಿರುತ್ತಾರೆ. ಜತೆಗೆ ಉತ್ತಮ ಸಾಧನೆ ಮಾಡಬೇಕೆಂಬ ಆಸೆ ಹೊಂದಿರುತ್ತಾರೆ. ಅದಕ್ಕಾಗಿ ಹಗಲಿರುಳು ದುಡಿಯುತ್ತಾರೆ. ಈ ಹಿನ್ನೆಲೆಯಲ್ಲಿ ಮಕ್ಕಳು ಉನ್ನತ ಸಾಧನೆ ಮಾಡುವ ಗುರಿಯಿಟ್ಟುಕೊಂಡು ವ್ಯಾಸಂಗ ಮಾಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀಹರಿ ದೇಶಪಾಂಡೆ, ಸುವರ್ಣಾ ವಿದ್ಯಾರ್ಥಿಗಳ ಪಾಲಕರು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post