ಕಲ್ಪ ಮೀಡಿಯಾ ಹೌಸ್ | ಬೀದರ್ ದಕ್ಷಿಣ |
ಗ್ರಾಮೀಣ ಜನರು ತಮ್ಮ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡುವ ಜೊತೆಯಲ್ಲಿ ಪ್ರತಿಯೊಬ್ಬರೂ ನೀರನ್ನು ಕುದಿಸಿ ಆರಿಸಿ ಸೇವಿಸಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ MLA Dr. Shailendra Beldale ಸಲಹೆ ನೀಡಿದ್ದಾರೆ.
ಬೀದರ್ ದಕ್ಷಿಣ ಕ್ಷೇತ್ರದ ಬರಿದಾಬಾದ ಗ್ರಾಮದಲ್ಲಿ ಕಲುಷಿತ ನೀರು ಸೇವಸಿ ಹಲವು ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಬರಿದಾಬಾದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಮ ಅಲ್ಲಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ನಂತರ ಅವರು ಮಾತನಾಡಿದರು.

Also read: ಗೊಂಡ ಕುರುಬ, ಕುರುಬ ಗೊಂಡ ಪರ್ಯಾಯ ಪದಗಳೆಂದು ಪರಿಗಣಿಸಿ: ಕೇಂದ್ರಕ್ಕೆ ಗೊಂಡ ಸಮಾಜದಿಂದ ಮನವಿ
ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಸುತ್ತಾಡಿ ಅಲ್ಲಿನ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಹಲವು ಮನೆಗಳು ಭಾಗಶಃ ಹಾನಿಯಾಗಿವೆ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದರು.
ಹಲವು ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಾಗಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣ ವಾಗುತ್ತಿದೆ ಈ ಕೂಡಲೇ ಅಧಿಕಾರಿಗಳು ಪರಿಶೀಲನೆ ನಡೆಸಿ ಗುತ್ತಿಗೆದಾರನಿಗೆ ನೋಟಿಸ್ ಜಾರಿ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ವೈದ್ಯರು, ಗ್ರಾಪಂ ಅಧಿಕಾರಿಗಳು ಗ್ರಾಮಸುತ್ತೆಲ್ಲಾ ಸುತ್ತಾಡಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಜನಸಾಮಾನ್ಯರ ಆರೋಗ್ಯ ಕಾಪಾಡಬೇಕು. ಪ್ರತಿಯೊಬ್ಬರು ಕುಡಿಯುವ ನೀರು ಕಾಸಿ ಆರಿಸಿ ಸೇವಿಸಬೇಕು. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಿದರು.
ಗ್ರಾಮದಲ್ಲಿರುವ ವೈದ್ಯರಿಗೆ ಮಾತನಾಡಿ ಗ್ರಾಮದ ಎಲ್ಲ ಜನರಲ್ಲಿ ಆರೋಗ್ಯದ ಕುರಿತು ನಿಗಾ ವಹಿಸಬೇಕು ಎಂದು ಸೂಚಿಸಿದರು.
ಗ್ರಾಮದ ಸುತ್ತಮುತ್ತ ಇರುವ ರಸ್ತೆ ಸಮಸ್ಯೆ ಚರಂಡಿ ವ್ಯವಸ್ಥೆ ಕುರಿತು ಅಹವಾಲು ಸ್ವೀಕರಿಸಿ ಶೀಘ್ರವೆ ನರೆಗಾದಡಿ ಚರಂಡಿ ವ್ಯವಸ್ಥೆ ಮಾಡಬೇಕು ಮತ್ತು ನಮ್ಮ ಅನುದಾನದಲ್ಲಿ ರಸ್ತೆ ವ್ಯವಸ್ಥೆ ಮಾಡಲಾಗುವುದು ಎಂದರು.












Discussion about this post