ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ಕ್ಷೇತ್ರದ ಒಳಿತಿಗಾಗಿ ಕ್ರಮ ಸಂಖ್ಯೆ ನಾಲ್ಕರ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ತಲೆಯ ಮೇಲೆ ಭತ್ತದ ಹೊರೆ ಹೊತ್ತ ರೈತ ಮಹಿಳೆಯ ಗುರುತಿಗೆ ಮತ ನೀಡುವಂತೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರು, ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು Bandeppa Khashempur ಮನವಿ ಮಾಡಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ನೀಡವಂಚಾ, ಬಂಬಳಗಿ, ರೇಕುಳಗಿ, ಹುಚ್ಚುಕನಳ್ಳಿ, ಖೇಣಿ ರಂಜೋಳ ಕ್ರಾಸ್, ಸಿರಕಟ್ಟನಳ್ಳಿ, ಮಂಗಲಗಿ ವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಗ್ಗೆ ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ನಾಡಿನ ಒಳಿತಿಗಾಗಿ ಕೆಲಸ ಮಾಡುತ್ತಿದು, ಮತದಾರರು ಜೆಡಿಎಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ನಾವು ಅನೇಕ ಮಹತ್ವದ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ನಾಡಿನ ಜನತೆಗೆ ನೀಡಿದ್ದೇವೆ. ರೈತರ ಸಾಲಮನ್ನಾ ಮಾಡಿದ್ದೇವೆ. ಅಧಿಕಾರಕ್ಕೆ ಬಂದ ಕೂಡಲೇ ಮಹಿಳಾ ಸಹಕಾರ ಸಂಘಗಳ ಸಾಲಮನ್ನಾ ಮಾಡುತ್ತೇವೆ. ಅನೇಕ ವೇತನಗಳನ್ನು ಹೆಚ್ಚಿಸುತ್ತೇವೆ. ರೈತರ ಬೋರ್ ವೆಲ್ ಗಳಿಗೆ 24 X 7 ನಿರಂತರವಾಗಿ ವಿದ್ಯುತ್ ಸೌಲಭ್ಯ ನೀಡುತ್ತೇವೆ.
Also read: ಬಾಬಾ ಸಾಹೇಬರ ಆಶಯದಂತೆ ಸೇವೆ: ಬೀದರ್ ದಕ್ಷಿಣ ಬಿಜೆಪಿ ಅಭ್ಯರ್ಥಿ ಶೈಲೇಂದ್ರ ಬೆಲ್ದಾಳೆ
ರೈತರ ಕೃಷಿ ಖರ್ಚಿಗಾಗಿ ಎಕರೆಗೆ 10 ಸಾವಿರ ರೂ.ಗಳಂತೆ ಗರಿಷ್ಠ ಹತ್ತು ಎಕರೆಯವರೆಗೂ ಸಹಾಯಧನ ನೀಡಲಿದ್ದೇವೆ. ಕ್ಷೇತ್ರದ ಜನರು ಹಾಗೂ ರಾಜ್ಯದ ಜನರು ಜೆಡಿಎಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು. ಪಕ್ಷದ ರಾಜ್ಯ, ಜಿಲ್ಲಾ, ತಾಲೂಕು, ಹೋಬಳಿ ಮಟ್ಟದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post