No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

kalpa News by kalpa News
June 3, 2026
in ಬೀದರ್
1
ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೀದರ್ |

ಸಿಂಧೋಲ ಗ್ರಾಮದ ಬಳಿ ಸುಮಾರು ₹7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಸೇತುವೆ ಕೇವಲ ಒಂದು ಅಭಿವೃದ್ಧಿ ಕಾಮಗಾರಿಯಲ್ಲ, ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳ ಜನರ ಬಹುಕಾಲದ ಕನಸಿನ ಸಾಕಾರವಾಗಿದೆ. ಮಳೆಗಾಲದಲ್ಲಿ ಜನರು ಅನುಭವಿಸುತ್ತಿದ್ದ ಸಂಚಾರದ ಸಂಕಷ್ಟಕ್ಕೆ ಈ ಸೇತುವೆ ಶಾಶ್ವತ ಪರಿಹಾರ ಒದಗಿಸಿದೆ ಎಂದು ಶ್ರೀ ವೀರೇಶ್ವರ ಶಿವಾಚಾರ್ಯ ಧನಾಶ್ರೀ ಅವರು ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಸಿಂಧೋಲ ಗ್ರಾಮದ ಬಳಿ ನಿರ್ಮಿಸಲಾದ ಸೇತುವೆ ಲೋಕಾರ್ಪಣೆ ಹಿನ್ನೆಲೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಂದ ಆಯೋಜಿಸಿದ್ದ ಅಭಿನಂದನಾ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಈ ಸೇತುವೆ ಅತ್ಯಂತ ಉಪಯುಕ್ತವಾಗಿದೆ. ಈ ಮಹತ್ವದ ಕಾಮಗಾರಿಯನ್ನು ಪೂರ್ಣಗೊಳಿಸಿ ಜನರಿಗೆ ಸಮರ್ಪಿಸಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಅಭಿವೃದ್ಧಿ ಪರ ಕಾಳಜಿಯನ್ನು ಅಭಿನಂದಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ಇಂತಹ ಜನೋಪಯೋಗಿ ಯೋಜನೆಗಳು ಇನ್ನಷ್ಟು ಆಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು, “ಸಿಂಧೋಲ ಗ್ರಾಮದ ಬಳಿ ಮಳೆಗಾಲದಲ್ಲಿ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಇದೀಗ ಸುಮಾರು ₹7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆಯು ಸುತ್ತಮುತ್ತಲಿನ ಸುಮಾರು 40 ಗ್ರಾಮಗಳ ಜನರಿಗೆ, ರೈತರಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಮಹತ್ತರ ಅನುಕೂಲ ಕಲ್ಪಿಸಿದೆ” ಎಂದರು.

Also read: Young Woman Dies of Cardiac Arrest; Parents Give New Life Through Organ Donation

“ಹಲವು ವರ್ಷಗಳ ಕಾಲ ಜನರು ಎದುರಿಸುತ್ತಿದ್ದ ಸಂಚಾರದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿರುವ ಈ ಸೇತುವೆ ಗ್ರಾಮೀಣ ಅಭಿವೃದ್ಧಿಯ ಮಹತ್ವದ ಹೆಜ್ಜೆಯಾಗಿದೆ. ಗ್ರಾಮಸ್ಥರು ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಿರುವುದು ಅಪಾರ ಸಂತಸ ತಂದಿದೆ. ಜನರ ವಿಶ್ವಾಸ, ಪ್ರೀತಿ ಹಾಗೂ ಆಶೀರ್ವಾದವೇ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರೇರಣೆಯಾಗಿದೆ” ಎಂದು ಹೇಳಿದರು.

“ಬೀದರ್ ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿಯಾಗಿದೆ. ಮುಂದಿನ ದಿನಗಳಲ್ಲಿಯೂ ರಸ್ತೆ, ಸೇತುವೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಜನರ ಬದುಕನ್ನು ಇನ್ನಷ್ಟು ಸುಗಮಗೊಳಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಲಾಗುವುದು” ಎಂದು ಭರವಸೆ ನೀಡಿದರು.
ರೈತರ ಸಂತಸ

ಶ್ರೀ ಭಗವಂತಪ್ಪ ಸಿಂಧೋಲ (ರೈತ) ಮಾತನಾಡಿ, “ಮಳೆಗಾಲದಲ್ಲಿ ನಮ್ಮ ಜಮೀನುಗಳಿಗೆ ತೆರಳುವುದು ತುಂಬಾ ಕಷ್ಟವಾಗುತ್ತಿತ್ತು. ಈಗ ಸೇತುವೆ ನಿರ್ಮಾಣದಿಂದ ಕೃಷಿ ಚಟುವಟಿಕೆಗಳು ಸುಗಮವಾಗಿವೆ. ನಮ್ಮ ಬಹುಕಾಲದ ಬೇಡಿಕೆ ಈಡೇರಿದೆ. ದಶಕಗಳ ಕಾಲ ಜನರು ಎದುರಿಸುತ್ತಿದ್ದ ಸಮಸ್ಯೆಗೆ ಇಂದು ಶಾಶ್ವತ ಪರಿಹಾರ ದೊರೆತಿದೆ. ಈ ಸೇತುವೆಯಿಂದ ವಿದ್ಯಾರ್ಥಿಗಳ ಶಿಕ್ಷಣ, ರೈತರ ಕೃಷಿ ಚಟುವಟಿಕೆಗಳು ಹಾಗೂ ವ್ಯಾಪಾರ ವಹಿವಾಟುಗಳಿಗೆ ಹೆಚ್ಚಿನ ಅನುಕೂಲವಾಗಿದ್ದು, ಗ್ರಾಮೀಣ ಅಭಿವೃದ್ಧಿಗೆ ಹೊಸ ವೇಗ ಸಿಕ್ಕಿದೆ” ಎಂದು ಹೇಳಿದರು.

ಮೋದಿನ್ (ಗ್ರಾಮದ ಮುಖಂಡ) ಮಾತನಾಡಿ, “ಸುಮಾರು 30ಕ್ಕೂ ಹೆಚ್ಚು ವರ್ಷಗಳಿಂದ ಮಳೆಗಾಲದಲ್ಲಿ ಸಂಪರ್ಕ ಕಡಿತಗೊಂಡು ಜನರು ಅನುಭವಿಸುತ್ತಿದ್ದ ಸಂಕಷ್ಟಗಳಿಗೆ ಈ ಸೇತುವೆ ಶಾಶ್ವತ ಪರಿಹಾರ ಒದಗಿಸಿದೆ. ಮಳೆಗಾಲ ಬಂದಾಗ ಗ್ರಾಮಗಳ ನಡುವಿನ ಸಂಪರ್ಕ ಸಂಪೂರ್ಣ ಕಡಿತಗೊಂಡು, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು, ರೈತರು ತಮ್ಮ ಜಮೀನುಗಳಿಗೆ ಹೋಗಲು ಹಾಗೂ ಸಾರ್ವಜನಿಕರು ತುರ್ತು ಅಗತ್ಯಗಳಿಗಾಗಿ ಸಂಚರಿಸಲು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದರು. ಇದೀಗ ಈ ಸೇತುವೆ ನಿರ್ಮಾಣದಿಂದ ಆ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆತಿದೆ” ಎಂದು ತಿಳಿಸಿದರು.

ನಾವು ಹಲವು ವರ್ಷಗಳಿಂದ ಈ ಸೇತುವೆಯ ನಿರೀಕ್ಷೆಯಲ್ಲಿದ್ದೆವು. ಮಳೆಗಾಲದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ರೈತರು ಕೃಷಿ ಚಟುವಟಿಕೆಗಳಿಗೆ ತೆರಳಲು ಪರದಾಡುತ್ತಿದ್ದರು. ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವುದೂ ಕಷ್ಟಕರವಾಗಿತ್ತು. ಇಂದು ₹7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯಿಂದ ಸುಮಾರು 40 ಗ್ರಾಮಗಳ ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ. ಇದು ಕೇವಲ ಸೇತುವೆಯಲ್ಲ, ನಮ್ಮ ಭಾಗದ ಅಭಿವೃದ್ಧಿಗೆ ಹೊಸ ದಾರಿಯಾಗಿದೆ. ಈ ಜನಪರ ಅಭಿವೃದ್ಧಿ ಕಾರ್ಯಕ್ಕಾಗಿ ಶಾಸಕರಿಗೆ ನಾವು ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
ಶಿವಕುಮಾರ ಸಿಂಧೋಲ  (ಮುಖಂಡ) ಮಾತನಾಡಿ, “ಸುಮಾರು 40 ಗ್ರಾಮಗಳ ಜನರ ಕನಸಾಗಿದ್ದ ಸೇತುವೆ ಇಂದು ನನಸಾಗಿದೆ. ಈ ಅಭಿವೃದ್ಧಿ ಕಾರ್ಯದಿಂದ ಜನರ ಜೀವನದಲ್ಲಿ ಮಹತ್ತರ ಬದಲಾವಣೆ ಬಂದಿದೆ. ಶಾಸಕರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಗುರುನಾಥ ರಾಜಗೀರ, ರಾಜರೆಡ್ಡಿ ಶಾಬಾದ, ಪ್ರಭು ಮೆಂಗಾ, ಮಾಣಿಕಪ್ಪ ಖಾಶೆಂಪುರ, ಸುರೇಶ ಮಾಶೆಟ್ಟಿ, ಶಿವಕುಮಾರ ಸ್ವಾಮಿ, ಜಗನಾಥ್ ಪಾಟೀಲ, ಚಂದ್ರಶೇಖರ ಶೇಖಾಪುರ, ಮಲ್ಲಿಕಾರ್ಜುನ ಮುತ್ತಂಗಿ, ಚಂದ್ರಯ್ಯ ಸ್ವಾಮಿ, ಸಂಜುಕುಮಾರ ಕೋಳಿ, ಘಾಳೇಪ್ಪ ಚಟನಳ್ಳಿ, ಶಿವಶರಣಪ್ಪ ತಗಾರೆ, ಜೋಸೆಫ್ ಕೊಡ್ಡೆಕರ್, ಹೇಮಾ ತುಕ್ಕಾರೆಡ್ಡಿ, ಸಂತೋಷಿ ನಿಡವಂಚಾ, ಸಂತೋಷರೆಡ್ಡಿ ಆಣದೂರ, ಜಗನ್ನಾಥ ಜಮಾದಾರ, ಶ್ರೀನಿವಾಸ ಪೊದ್ದಾರ, ಅನೀಲಕುಮಾರ ಪನ್ನಾಳೆ, ನಾರಾಯಣರೆಡ್ಡಿ, ಗುಂಡಪ್ಪ ಬುಧೇರಾ, ಕಾಶಿನಾಥ ಸಿಂಧೋಲ, ಸಂಗಯ್ಯ ಸ್ವಾಮಿ, ಭಗವಂತಪ್ಪ ಸಿಂಧೋಲ, ಶಂಕರೆಪ್ಪ ಬಾಪೂರ, ರಾಮು ರಾಠೋಡ್, ಜಗನ್ನಾಥ ರಾಜಗೀರ, ಮಂಜುನಾಥ ಸುಣಗಾರ, ರಾಜಕುಮಾರ ಯಾಕತಪುರ, ಪೀರಪ್ಪ ಸೇರಿದಂತೆ ಅನೇಕ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೀದರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Young Woman Dies of Cardiac Arrest; Parents Give New Life Through Organ Donation

Next Post

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

kalpa News

kalpa News

Next Post
ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

Comments 1

  1. Pingback: ನೂತನ ಸಂಪಟಕ್ಕೆ 12 ಜನ ಸಚಿವರ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL