ಕಲ್ಪ ಮೀಡಿಯಾ ಹೌಸ್ | ಸಾಗರ |
ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಹತ್ತಿರ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ.
ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಟ್ರಕ್ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಆನಂದಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಾಲಾ ಕಾಲೇಜು ಸಮಯವಾದ್ದರಿಂದ ಬಸ್ಸಿನಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳೇ ಇದ್ದರು ಎಂದು ತಿಳಿದು ಬಂದಿದೆ.
ಸಾಗರದ ಮರ್ಕಜ್ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಕೂಡಲೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post