ಗಡ್ ಚಿರೋಲಿ: ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವಂತೆಯೇ ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ನಕ್ಸಲರು ಐಇಡಿ ಬಾಂಬ್ ಸ್ಫೋಟಿಸಿದ ಪರಿಣಾಮ 16 ಕಮಾಂಡೋಗಳು ಹುತಾತ್ಮರಾಗಿದ್ದಾರೆ.
ಉತ್ತರ ಗಡ್ ಚಿರೋಲಿಯ ಕುರ್ಖೇಡಾದಿಂದ ಸುಮಾರು 6 ಕಿಮೀ ದೂರದಲ್ಲಿರುವ ಲೆಂಧ್ರಿ ಪೂಲ್ ಬಳಿ 16 ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ.
ಕಳೆದ 24 ಗಂಟೆಯಲ್ಲಿ ನಕ್ಸಲರ ಎರಡನೇ ಕೃತ್ಯ ಇದಾಗಿದ್ದು, ಇಂದು ಬೆಳಗಿನ ಜಾವ ಗಡ್ ಚಿರೋಲಿ ಜಿಲ್ಲೆಯ ಕುರ್ಖೇಡಾದಲ್ಲಿ ಗುತ್ತಿಗೆದಾರರೊಬ್ಬರಿಗೆ ಸೇರಿದ ಕನಿಷ್ಠ 36 ವಾಹನಗಳಿಗೆ ಬೆಂಕಿ ಹಚ್ಚಿದ್ದರು.
ಘಟನೆ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಂಡು ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರೆಸಲಾಗಿದೆ.
Discussion about this post