ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯ, ಮಸೀದಿ ಧ್ವಂಸ ಪೂರ್ವ ನಿಯೋಜಿತವಲ್ಲ ಎಂದಿದೆ.
ಈ ಕುರಿತಂತೆ ಲಕ್ನೋ ಸಿಬಿಐ ವಿಶೇಷ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಬಿಜೆಪಿಯ ಭೀಷ್ಮ ಎಲ್.ಕೆ. ಆಡ್ವಾಣಿ, ಉಮಾಭಾರತಿ, ಮುರಳಿ ಮನೋಹರ ಜೋಷಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ.
ಮಸೀದಿ ಧ್ವಂಸದಲ್ಲಿ ಸಂಘ ಪರಿವಾರ ಹಾಗೂ ಬಿಜೆಪಿ ನಾಯಕರ ಪಾತ್ರವಿಲ್ಲ ಎಂದು ಹೇಳಿರುವ ನ್ಯಾಯಾಲಯ, 12 ಗಂಟೆವರೆಗೂ ಎಲ್ಲವೂ ಸರಿಯಿತ್ತು. ಆದರೆ, ಆನಂತರ ಉದ್ರಿಕ್ತ ಕರ ಸೇವಕರಿಂದ ಈ ಕಾರ್ಯ ನಡೆಯಿತೇ ಹೊರತು ಅದು ಪೂರ್ವ ನಿಯೋಜಿತವಲ್ಲ. ಧ್ವಂಸದಲ್ಲಿ ಆಯೋಜಕರ ಪಾತ್ರವಿಲ್ಲ ಎಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post