ಬೆಂಗಳೂರು: ಚಂದ್ರಯಾನ 2ರ ಕೊನೆಯ ಗಳಿಗೆಯಲ್ಲಿ ಸಂಪರ್ಕ ಕಡಿತಗೊಂಡಿದ್ದ ವಿಕ್ರಂ ಲ್ಯಾಂಡರ್ ಇರುವ ಸ್ಥಳವನ್ನು ಇಸ್ರೋ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಈ ಮೂಲಕ ಹೊಸ ಭರವಸೆ ಮೂಡಿದೆ.
ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ ಬಹುತೇಕ ಯಶಸ್ವಿಯಾಯಿತು ಎನ್ನುವ ವೇಳೆ ಕೊನೆಯ ಹಂತದಲ್ಲಿ ಸಂಪರ್ಕ ಕಡಿತಗೊಂಡು, ಇಡಿಯ ದೇಶದ ನೋವಿಗೆ ಕಾರಣವಾಗಿತ್ತು. ಆದರೆ, ಸಂಪರ್ಕ ಕಡಿತಗೊಂಡಿದ್ದ ವಿಕ್ರಂ ಲ್ಯಾಂಡರ್ ಇರುವ ಸ್ಥಳವನ್ನು ಇಸ್ರೋ ವಿಜ್ಞಾನಿಗಳು ಪತ್ತೆ ಮಾಡಿದ್ದು, ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್ ವಿಕ್ರಮ್ ಲ್ಯಾಂಡರ್’ನ ಛಾಯಾಚಿತ್ರಗಳನ್ನು ಬೆಂಗಳೂರಿನ ಇಸ್ರೋ ನಿಯಂತ್ರಣ ಕೊಠಡಿಗೆ ರವಾನಿಸಿದೆ.
ಈ ಕುರಿತಂತೆ ಹೇಳಿಕೆ ನೀಡಿರುವ ಇಸ್ರೋ ಅಧ್ಯಕ್ಷ ಕೆ. ಸಿವನ್, ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದಿರುವುದು ಪತ್ತೆಯಾಗಿದ್ದು, ಇದರ ಫೊಟೋಗಳು ನಮಗೆ ಲಭ್ಯವಾಗಿದೆ. ಆದರೆ, ಇದರ ಮಾಹಿತಿಯನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಆದಷ್ಟು ಶೀಘ್ರ ವಿಕ್ರಂ ಲ್ಯಾಂಡರ್ ಜೊತೆ ಸಂಪರ್ಕ ಸಾಧಿಸುವ ವಿಶ್ವಾಸ ನಮಗಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
Discussion about this post