ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ, ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಮತ್ತೆ ತಿಹಾರ್ ಜೈಲೇ ಗತಿಯಾಗಿದೆ.
ಇಂದು ಮಧ್ಯಾಹ್ನ 3.30ಕ್ಕೆ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ಕುರಿತ ಆದೇಶ ಪ್ರಕಟವಾಗಬೇಕಿತ್ತು. ಆದರೆ ಸುಮಾರು ಒಂದೂವರೆ ಗಂಟೆಗಳ ಕಾಲ ನ್ಯಾಯಾಧೀಶ ಕುಹರ್ ಅವರು ತಮ್ಮ ಕೋಣೆಯಲ್ಲಿಯೇ ಹಾಜರಾದ ವಕೀಲರ ಮಾಹಿತಿಯನ್ನು ಪಡೆದುಕೊಂಡು, 5.15ಕ್ಕೆ ಜಾಮೀನು ಅರ್ಜಿ ವಜಾಗೊಳಿಸಿರುವುದಾಗಿ ಒಂದೇ ವಾಕ್ಯದಲ್ಲಿ ತೀರ್ಪು ಪ್ರಕಟಿಸಿದರು.
Discussion about this post