ನವದೆಹಲಿ: ಸುಷ್ಮಾ ಸ್ವರಾಜ್ ಅವರ ಅಗಲಿಕೆಯ ನೋವಿನಿಂದ ಇನ್ನೂ ಹೊರಬರದ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಇಂದು ಇಹಲೋಕ ತ್ಯಜಿಸಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಾಷ್ಟ್ರ ಬಿಜೆಪಿಯ ಮತ್ತೊಂದು ಮಹತ್ವದ ಕೊಂಡಿ ಕಳಚಿದ್ದು, ಪಕ್ಷದ ವಲಯದಲ್ಲಿ ಸೂತಕದ ಛಾಯೆ ಆವರಿಸಿದೆ.
ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇಂದ್ರ ಸಚಿವರುಗಳು, ಬಿಜೆಪಿ ಮುಖಂಡರು, ಪ್ರತಿಪಕ್ಷಗಳ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಜೇಟ್ಲಿ ಅವರ ಆರೋಗ್ಯ ಗಂಭೀರವಾಗ ಹಿನ್ನೆಲೆಯಲ್ಲಿ ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಬುಲೆಟಿನ್ ಬಿಗುಗಡೆ ಮಾಡಿರಲಿಲ್ಲ.
Discussion about this post