ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಅಭಿವೃದ್ಧಿಯಲ್ಲಿ ಐತಿಹಾಸಿಕವಾದ ನಿರ್ಧಾರಗಳನ್ನು ಕೈಗೊಂಡಿದ್ದ ದೂರದೃಷ್ಠಿಯ ನಾಯಕ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ(93) #SMKrishna ಇಂದು ನಸುಕಿನಲ್ಲಿ ವಿಧಿವಶರಾಗಿದ್ದಾರೆ.
ಇಂದು ನಸುಕಿನ 2.30ರ ವೇಳೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರ ಮನೆಗೆ ಆಗಮಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ 3.30ಕ್ಕೆ ವೈದ್ಯರು ಕೃಷ್ಣ ಕೊನೆಯುಸಿರೆಳೆದಿದ್ದಾರೆ.
ರಾತ್ರಿ ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮನೆಯಿಂದ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು. ಆದರೆ, ಅಷ್ಟರೊಳಗೆ ಅವರು ಇಹ ಲೋಕ ತ್ಯಜಿಸಿದ್ದಾರೆ.
ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ.
ಸದಾಶಿವನಗರದ ಬಳಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಅಂತಿಮವಿಧಿ ವಿಧಾನಗಳ ಬಗ್ಗೆ ಕುಟುಂಬಸ್ಥರು ಮಾಹಿತಿ ನೀಡಬೇಕಿದೆ.
ಚಳಿಗಾಲದ ಅಧಿವೇಶನ ಹಿನ್ನೆಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುರ್ಮಾ ಸೇರಿದಂತೆ ಎಲ್ಲಾಸಚಿವರು, ಶಾಸಕರು ಮತ್ತು ವಿಪP್ಷÀ ನಾಯಕರು ಬೆಳಗಾವಿಯಲ್ಲಿದ್ದು, ಸಂಜೆ ವೇಳೆಗೆ ಬೆಂಗಳೂರಿನತ್ತ ಆಗಮಿಸುವ ಸಾಧ್ಯತೆಗಳಿವೆ.
ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ವಿದೇಶಾಂಗ ಸಚಿವರಾಗಿ ಎಸ್.ಎಂ. ಕೃಷ್ಣ ಅವರ ಕೊಡುಗೆ ಅಪಾರವಾಗಿದ್ದು, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿಗೆ ಅವರ ಸೇವೆ ಅಪಾರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post