ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಾದ್ಯಂತ ಜನವರಿ 2ರವರೆಗೂ ನೈಟ್ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂದಿನಿಂದಲೇ ಜಾರಿಗೆ ಬರುವಂತೆ ಜ.2ರವರೆಗೂ ಮುಂಜಾಗ್ರತಾ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಪ್ರತಿ ದಿನ ರಾತ್ರಿ 10ರಿಂದ ಮುಂಜಾನೆ 6ರವರೆಗೂ ಇದು ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಯಾರೂ ಮನೆಗಳಿಂದ ಹೊರಬರುವಂತಿಲ್ಲ ಎಂದಿದ್ದಾರೆ.
ಇನ್ನು, ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಸುಧಾಕರ್, ಸಾರ್ವಜನಿಕರ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಅವಧಿಯಲ್ಲಿ ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶವಿದ್ದು, ಬೇರೆ ಯಾವುದೇ ರೀತಿ ವ್ಯಾಪಾರ ವ್ಯವಹಾರ, ವಾಹನ ಓಡಾಟವನ್ನು ನಿಷೇಧಿಸಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ವಾಹನಗಳಿಗೆ ಯಾವುದೇ ರೀತಿಯ ಅಡೆತಡೆಯಿಲ್ಲ. ಈ ಅವಧಿಯಲ್ಲಿ ಯಾರೂ ಸಹ ಮನೆಗಳಿಂದ ಹೊರಕ್ಕೆ ಬರುವಂತಿಲ್ಲ ಎಂದು ತಿಳಿಸಿದ್ದಾರೆ.
ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬ್ರೇಕ್
ಇನ್ನು, ಈ ಬಾರಿಯ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯನ್ನು ರಾಜ್ಯ ಸರ್ಕಾರ ಸಂಪೂರ್ಣ ನಿಷೇಧಿಸಿದ್ದು, ಯಾವುದೇ ರೀತಿಯಲ್ಲೂ ಆಚರಣೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.
ನೈಟ್ ಕ್ಲಬ್, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್ ಸೇರಿದಂತೆ ಎಲ್ಲೂ ಸಹ ಪಾರ್ಟಿಗಳನ್ನು ನಡೆಸುವಂತಿಲ್ಲ.
ಹೆಚ್ಚಿನ ಸುದ್ದಿ ನಿರೀಕ್ಷಿಸಿ…
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















