ಕಲ್ಪ ಮೀಡಿಯಾ ಹೌಸ್ | ವಾರಣಾಸಿ |
ಇಲ್ಲಿನ ಜ್ಞಾನವ್ಯಾಪಿ ಮಸೀದಿ #GyanvapiMosque ವಿಚಾರದಲ್ಲಿ ಹಿಂದೂಗಳಿಗೆ ಭರ್ಜರಿ ಮುನ್ನಡೆ ದೊರೆತಿದ್ದು, ಭಾರತೀಯ ಪುರಾತತ್ವ ಇಲಾಖೆಯಿಂದ #ASI ಮಸೀದಿಯ ಸರ್ವೆಗೆ ನ್ಯಾಯಾಲಯ ಆದೇಶಿಸಿದೆ.
ಈ ಕುರಿತಂತೆ ಮಹತ್ವದ ಅನುಮತಿ ನೀಡಿರುವ ನ್ಯಾಯಾಲಯ, ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್’ಐ) #ArchaeologicalSurveyOfIndia ಅನುಮತಿ ನೀಡಿದೆ.
ಆದಾಗ್ಯೂ, ಶಿವಲಿಂಗವನ್ನು ಹೋಲುವ ರಚನೆ ಕಂಡುಬAದಿರುವ ವುಝುಖಾನಾ (ಸ್ನಾನದ ಸ್ಥಳ) ಅನ್ನು ಸಮೀಕ್ಷೆಯ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ನ್ಯಾಯಾಲಯ ಹೇಳಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್’ಐ) ಇಡೀ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ನಿರ್ದೇಶನ ನೀಡುವಂತೆ ಕೋರಿ ಹಿಂದೂ ಕಡೆಯವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಜುಲೈ 14 ರಂದು ನ್ಯಾಯಾಲಯವು ಈ ವಿಷಯದ ಬಗ್ಗೆ ವಾದವನ್ನು ಪೂರ್ಣಗೊಳಿಸಿತು.
ಪ್ರಕರಣದಲ್ಲಿ ಹಿಂದೂಗಳನ್ನು ಪ್ರತಿನಿಧಿಸುತ್ತಿರುವ ವಿಷ್ಣು ಶಂಕರ್ ಜೈನ್ ಅವರು ಸುದ್ದಿ ಸಂಸ್ಥೆ ಎಎನ್’ಐಗೆ ಮಾತನಾಡಿದ್ದು, ನನ್ನ ಅರ್ಜಿಯನ್ನು ಅನುಮೋದಿಸಲಾಗಿದೆ ಎಂದು ನನಗೆ ತಿಳಿಸಲಾಗಿದೆ.
ಮೊಹರು ಮಾಡಲಾದ ವಾಜು ಟ್ಯಾಂಕ್ ಅನ್ನು ಹೊರತುಪಡಿಸಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್’ಐ ಸಮೀಕ್ಷೆಯನ್ನು ನಡೆಸಲು ನ್ಯಾಯಾಲಯವು ಸೂಚಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post