ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯಿಲ್ಲದೇ ಸಾಗಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಸೀರೆ ಹಾಗೂ ನಗದು ಹಣವನ್ನು ಚೆಕ್ ಪೋಸ್ಟ್’ಗಳಲ್ಲಿ ವಶಕ್ಕೆ ಪಡೆಯಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 5,40,000 ರೂ.ಗಳ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಗೆಯೇ, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ 59,00,000 ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post