ಕಲ್ಪ ಮೀಡಿಯಾ ಹೌಸ್ | ಸಾಗರ |
ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಾಗರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರತಾಳು ಹಾಲಪ್ಪ ಅವರಿಗೆ ಎರಡನೆಯ ಬಾರಿ ಟಿಕೇಟ್ ಘೋಷಣೆ ಮಾಡಿದೆ.
ಈ ಕುರಿತಂತೆ ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ 189 ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದ್ದು, ಸಾಗರ ಕ್ಷೇತ್ರದಿಂದ ಹಾಲಿ ಶಾಸಕ ಹರತಾಳು ಹಾಲಪ್ಪ ಅವರಿಗೆ 2ನೆಯ ಬಾರಿ ಟಿಕೇಟ್ ಘೋಷಣೆ ಮಾಡಲಾಗಿದ್ದು, ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
ಸಾಗರ ಕ್ಷೇತ್ರದಿಂದ ಹಾಲಪ್ಪನವರಿಗೆ ಈ ಬಾರಿ ಬಿಜೆಪಿ ಟಿಕೇಟ್ ಕೊಡಬಾರದು ಎಂದು ಬಹಳಷ್ಟು ಒತ್ತಡಗಳನ್ನು ಹಲವು ಮಂದಿ ಹೇರಿ, ಷಡ್ಯಂತ್ರ ರೂಪಿಸಿದ್ದರು. ಆದರೆ, ಇವುಗಳನ್ನೆಲ್ಲ ಮೀರಿ, ಹಾಲಪ್ಪನವರನ್ನು ಬಿಜೆಪಿ ವರಿಷ್ಠರು ಆಯ್ಕೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post