ಕಲ್ಪ ಮೀಡಿಯಾ ಹೌಸ್ | ಅಮರಾವತಿ(ಆಂಧ್ರಪ್ರದೇಶ) |
ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ #PawanKalyan ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಜನಸೇನಾ ಪಕ್ಷ #JanaSenaParty ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಬಹಿರಂಗ ಪಡಿಸಿದ್ದು, ಅನಾಮಧೇಯ ವ್ಯಕ್ತಿಯೊಬ್ಬರು ಉಪಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಿದೆ.
ಬೆದರಿಕೆ ಕರೆಗಳ ಜೊತೆಗೆ, ವ್ಯಕ್ತಿಯು ನಟ ಪರಿವರ್ತಿತ ರಾಜಕಾರಣಿಯನ್ನು ಗುರಿಯಾಗಿಟ್ಟುಕೊಂಡು ಅವಹೇಳನಕಾರಿ ಪಠ್ಯ ಸಂದೇಶಗಳನ್ನು ಸಹ ಕಳುಹಿಸಿದ್ದಾನೆ ಎಂದು ತಿಳಿಸಿದೆ.

ಪೇಶಿ(ಕಚೇರಿ) ಸಿಬ್ಬಂದಿಗಳಿಗೆ ಬೆದರಿಕೆ ಕರೆ ಬಂದಿದ್ದು, ಈ ವಿಚಾರವನ್ನು ಡಿಸಿಎಂ ಪವನ್ ಕಲ್ಯಾಣ್ ಅವರ ಗಮನಕ್ಕೆ ತಂದಿದ್ದಾರೆ.
ಈ ಬೆದರಿಕೆ ಕರೆಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಸೇರಿದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗುತ್ತದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post