ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಈ ಹಿಂದೆ ನಡೆದ ರೀತಿಯಲ್ಲೇ ಪಾಕಿಸ್ಥಾನದ #Pakistan ಮೇಲೆ ಭಾರತ ಸರ್ಜಿಕಲ್ ಸ್ಟ್ರೈಕ್ #SurgicalStrike ನಡೆಸಿದ ವಿಚಾರಗಳ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ #Defence ಸ್ಪಷ್ಟನೆ ನೀಡಿದ್ದು, ದಾಳಿ ನಡೆದಿಲ್ಲ, ಅದರೆ ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ ಎಂದಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಪಾಕಿಸ್ಥಾನದ ಮೇಲೆ ಭಾರತ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ #SurgicalStrike ನಡೆಸಿದ ಎಂಬ ಕುರಿತಾಗಿ ವರದಿಯಾದ ಕೆಲವೇ ಗಂಟೆಗಳಲ್ಲಿ ಸ್ಪಷ್ಟನೆ ನೀಡಿದೆ.
ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ ಎಂಬುದು ಸುಳ್ಳು. ಆದರೆ, ಗಡಿ ನಿಯಂತ್ರಣ ರೇಖೆಯಲ್ಲಿ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಉಗ್ರರನ್ನು ಕೊಲ್ಲಲಾಗಿದೆ ಎಂದು ತಿಳಿಸಿದೆ.
ಬಾಲಕೋಟ್ ವಲಯದ ಹಮೀರ್’ಪುರ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನ, ದಟ್ಟ ಮಂಜು, ದಟ್ಟ ಪೊದೆಗಳ ಅನುಕೂಲಗಳನ್ನು ಬಳಸಿಕೊಂಡು ಒಳನುಸುಳಲು ಇಬ್ಬರು ಉಗ್ರರು ಪ್ರಯತ್ನಿಸುತ್ತಿದ್ದರು. ಇವರನ್ನು ಗುರುತಿಸಿ ಅವರನ್ನು ಕೊಲ್ಲಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮುಂಜಾನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.
ಭಾರತಿಯ ಸೇನೆ ಶನಿವಾರ ರಾತ್ರಿ ಎಲ್’ಒಸಿಯಾದ್ಯಂತ 2.5 ಕಿ.ಮೀ ಮುಂದಕ್ಕೆ ಪ್ರವೇಶಿಸಿ ಪಾಕಿಸ್ಥಾನ ಭಯೋತ್ಪಾದಕರ 4 ಲಾಂಚಿಂಗ್ ಪ್ಯಾಡ್’ಗಳನ್ನು ನಾಶಪಡಿಸಿದೆ ಎಂದು ತಿಳಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post