ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರೀಕ್ಷೆಯಂತೆಯೇ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ “ಕೈ”ಪಕ್ಷಕ್ಕೆ ಗುಡ್ ಬೈ ಹೇಳಿ ತೆನೆ ಹೊತ್ತಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲು ಕೆ.ಬಿ ಪ್ರಸನ್ನ ಕುಮಾರ್ ತಯಾರಿ ನಡೆಸಿದ್ದರು. ಆದರೆ ಟಿಕೆಟ್ ಕೈತಿಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರೆ ಹಿನ್ನೆಲೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದರು. ಆದರೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಆಯನೂರು ಮಂಜುನಾಥ್ ಯಶಸ್ವಿಯಾಗಿದ್ದರು.
ಹೀಗಾಗಿ ಕೆ.ಬಿ. ಪ್ರಸನ್ನ ಕುಮಾರ್ ಕಾಂಗ್ರೆಸ್ ನಲ್ಲಿ ಮುಂದುವರೆಯುತ್ತಾರೆ ಎಂಬ ಸುದ್ದಿ ಇತ್ತಾದರೂ ಇದೀಗ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್ ಹಾಗೂ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಪ್ರಸನ್ನಕುಮಾರ್ ಅವರನ್ನು ಜೆಡಿಎಸ್ ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಕೆ.ಬಿ.ಪ್ರಸನ್ನ ಕುಮಾರ್ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.
ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರೊಂದಿಗೆ ಕೆಬಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಗರಪಾಲಿಕೆ ಮಾಜಿ ಸದಸ್ಯರಾದ ಬೊಮ್ಮನಕಟ್ಟೆ ಮಂಜುನಾಥ್, ರಘು ಮತ್ತಿತರರು ಕಾಂಗ್ರೇಸ್ ಸೇರ್ಪಡೆಗೊಂಡಿದ್ದಾರೆ.
ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಜೆಡಿಎಸ್ ಸೇರ್ಪಡೆಯಿಂದ ಶಿವಮೊಗ್ಗ ನಗರದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post