ಕಲ್ಪ ಮೀಡಿಯಾ ಹೌಸ್ | ಅಸ್ಸಾಂ |
ಮಹತ್ವದ ಬೆಳವಣಿಗೆಯೊಂದರಲ್ಲಿ ಮುಸ್ಲಿಂ ವಿವಾಹ ಕಾಯ್ದೆಯನ್ನು #MuslimMarriageAct ಅಸ್ಸಾಂ ರದ್ದು ಪಡಿಸಿದ್ದು, ಯುಸಿಸಿ #UCC ಜಾರಿಯತ್ತ ಮಹತ್ವದ ಹೆಜ್ಜೆಯನ್ನಿರಿಸಿದೆ.
ಮುಸ್ಲಿಂ ವಿವಾಹ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿದ್ದ 94 ಮುಸ್ಲಿಂ ರಿಜಿಸ್ಟ್ರಾರ್’ಗಳನ್ನು ಈಗ ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುತ್ತಿದೆ. ಈ ಮೂಲಕ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನಕ್ಕೆ ದೊಡ್ಡ ಹೆಜ್ಜೆಯನ್ನಿರಿಸಿದೆ.
94 ಮುಸ್ಲಿಂ ರಿಜಿಸ್ಟ್ರಾರ್’ಗಳನ್ನು #Register ಈಗ ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುತ್ತಿದ್ದು, ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿಯನ್ನು ಈಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಿಜಿಸ್ಟ್ರಾರ್ ವಹಿಸಿಕೊಳ್ಳುತ್ತಾರೆ.
ಅಸ್ಸಾಂ #Assam ಸರ್ಕಾರವು ಈಗ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ನೋಡಿಕೊಳ್ಳಲಾಗುವುದು. ಯುಸಿಸಿಯತ್ತ ಸಾಗುವುದು ಮುಖ್ಯ ಗುರಿಯಾಗಿದೆ ಎಂದು ಅಸ್ಸಾಂ ಸರ್ಕಾರ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post