ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಠ ಸೇರಿದಂತೆ ಹಲವು ಖ್ಯಾತ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಪ್ರಖ್ಯಾತ ನಿರ್ದೇಶಕ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾಡನಾಯಕನಹಳ್ಳಿಯ ತಮ್ಮ ಅಪಾರ್ಟ್ಮೆಂಟ್ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ದಿನದ ಹಿಂದೆಯೇ ಸಾವಿಗೆ ರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಇಂದು ವಿಷಯ ಬೆಳಕಿಗೆ ಬಂದಿದೆ. ಅಲ್ಲದೆ ಕೊಳೆತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















