ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಸುಳ್ಯ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿಯಲ್ಲಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ಜುಲೈ 22ರ ಮುಂಜಾನೆ 6 ಗಂಟೆವರೆಗೂ ಈ ಭಾಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶ ಹೊರಡಿಸಿದ್ದು, ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧ ಹೇರಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಆದೇಶ ಹೊರಡಿಸಿದ್ದಾರೆ.ಹವಾಮಾನ ಇಲಾಖೆಯ ವರದಿಯಂತೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಎಂಬ ಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸುವಂತೆ ಸೂಚಿಸಿದ್ದರು. ಹೀಗಾಗಿ, ನಿರ್ಬಂಧಿಸುವುದು ಸೂಕ್ತವೆಂದು ಕಂಡುಬಂದ ಕಾರಣ ಕೊಡಗು ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
Also read: ಶಿಕಾರಿಪುರ | ಮೈದುಂಬಿಕೊಂಡ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ
ರಾತ್ರಿ ವೇಳೆಯ ರಸ್ತೆ ಸಂಚಾರಕ್ಕೆ ನಿಷೇಧ ಹೇರುವಂತೆ ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post