ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ #PMNarendraModi ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಗಳನ್ನು ಭೇಟಿಯಾಗಿ ಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಯ #ParliamentElection ಫಲಿತಾಂಶ ಪ್ರಕಟವಾದ ನಂತರ ಇಂದು ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಕೊನೆ ಸಂಫುಟ ಸಭೆ ನಡೆಸಿ 17ನೇ ಲೋಕಸಭೆಯನ್ನು ವಿಸರ್ಜಿಸಿದರು.
ಆನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು #DraupadiMurmu ಅವರನ್ನು ಭೇಟಿಯಾಗಿ ರಾಜೀನಾಮೆ ಹಾಗೂ ಲೋಕಸಭೆಯ ವಿಸರ್ಜನೆ ಪತ್ರವನ್ನು ಸಲ್ಲಿಸಿದರು.
ಇದರೊಂದಿಗೆ ನೂತನ ಸರ್ಕಾರ ರಚನೆ ಅವಕಾಶ ಮಾಡಿಕೊಡಬೇಕು ಎಂದು ನರೇಂದ್ರ ಮೋದಿಯವರು ರಾಷ್ಟ್ರಪತಿಗಳಿಗೆ ಕೋರಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಇಂದು ಬೆಳಗ್ಗೆ ಪ್ರಧಾನಿ ನಿವಾಸದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಯಿತು. ಸಭೆಯು ಬೆಳಗ್ಗೆ 11.30 ಕ್ಕೆ ಪ್ರಾರಂಭವಾಗಿ ನಂತರ ಮಂತ್ರಿ ಮಂಡಲದ ಸಭೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಒಂದು ಮಾಹಿತಿಯಂತೆ ಜೂನ್ 8ರಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದ್ದರೂ, ಅಧಿಕೃತವಾಗಿ ಘೋಷಣೆಯಾಗಿಲ್ಲ.
ಈ ಕುರಿತಂತೆ ಅಧಿಕೃತ ಘೋಷಣೆಯಾಗಿಲ್ಲದೇ ಇದ್ದರೂ, ಬಹುತೇಕ ಇದೇ ದಿನಾಂಕಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಬಹುದು ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post