ಕಲ್ಪ ಮೀಡಿಯಾ ಹೌಸ್ | ಅಸ್ಸಾಂ |
ಇಲ್ಲಿನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #RoadAccident 12 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಲ್ಲಿನ ಕಮರ್ಬಂಧ ಪ್ರದೇಶದಿಂದ ತಿಲಿಂಗ ಮಂದಿರದ ಕಡೆ ತೆರಳುತ್ತಿದ್ದ ಬಸ್’ಗೆ ಟ್ರಕ್’ವೊಂದು ಇಂದು ಮುಂಜಾನೆ 5 ಗಂಟೆ ವೇಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ.
ಕಾರ್ಯಾಚರಣೆ ನಡೆಸಲಾಗಿದ್ದು, ಎಲ್ಲ ಮೃತದೇಹಗಳನ್ನು ಅವಶೇಷದ ಹೊರತೆಗೆಯಲಾಗಿದೆ. 27 ಗಾಯಾಳುಗಳನ್ನು ಜೋರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಗಾಯಗೊಂಡಿರುವ 25 ಮಂದಿಯ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post