ಕಲ್ಪ ಮೀಡಿಯಾ ಹೌಸ್ | ಸಾಗರ |
ಸ್ಥಳೀಯ ಪೊಲೀಸರ ಮಹತ್ವದ ಕಾರ್ಯಾಚರಣೆಯಲ್ಲಿ ಸುಮಾರು 15 ಲಕ್ಷ ರೂ. ಮೌಲ್ಯದ ಅಡಿಕೆ ಸಹಿತ ಐವರು ಕಳ್ಳರನ್ನು ಬಂಧಿಸಿದ್ದಾರೆ.
ಸಾಗರ ಗ್ರಾಮಾಂತರ, ಆನಂದಪುರ ಹಾಗೂ ಕಾರ್ಗಲ್, ಸೊರಬ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ.
ಸುಮಾರು 15.19 ಲಕ್ಷ ರೂ. ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖವಾಗಿ ಐವರು ಅಡಿಕೆ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ಪಿಕಪ್ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣವನ್ನು ಪತ್ತೆ ಮಾಡಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರಶಂಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























