ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ #LakshmiHebbalkar ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಸಾಂವಿಧಾನಿಕ ಪದ ಬಳಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ವಿಧಾನ ಮಂಡಲದಲ್ಲಿ ಹೈಡ್ರಾಮವೇ ನಡೆದಿದೆ.
ಹೆಬ್ಬಾಳ್ಕರ್ ವಿರುದ್ದ ಸಿ.ಟಿ. ರವಿ #CTRavi ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ವಿಚಾರ ಸದನದಲ್ಲಿ ಕೋಲಾಹಲ ಸೃಷ್ಠಿ ಮಾಡಿದ್ದು, ಪರ ವಿರೋಧದ ಹೈಡ್ರಾಮಾ ನಡೆದಿದ್ದು, ಅಲ್ಲೋಲಕಲ್ಲೋಲ ಸೃಷ್ಠಿಮಾಡಿದೆ.
ಸದನದಲ್ಲೇ ಸಿ.ಟಿ. ರವಿ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿ ಹೆಬ್ಬಾಳ್ಕರ್, ನಿನಗೆ ತಾಯಿ ಇಲ್ವೇನೋ, ಹೆಂಡತಿ ಇಲ್ವೇನೋ, ಮಗಳು ಇಲ್ವೇನೋ ಎಂದು ಹಿಗ್ಗಾಮುಗ್ಗಾ ಜರಿದಿದ್ದಾರೆ.

ಹೆಬ್ಬಾಳ್ಕರ್ ಪಿಎ ಸಂಗನಗೌಡ ಎನ್ನುವವರು ರವಿ ವಿರುದ್ಧ ದಬ್ಬಾಳಿಕೆ ನಡೆಸಿದ್ದಾರೆ ಎಂದು ವರದಿಯಾಗಿದ್ದು, ಕಬ್ಬಿಣದ ಗೇಟ್’ಗಳಿಗೆ ಒದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಶೂನ್ಯ ವೇಳೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಬಳಿಕ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿ.ಟಿ. ರವಿ ಆರೋಪಿಸಿದರು. ಇದಕ್ಕೆ ಕೌಂಟರ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀವು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು. ಆಗ ಸಿ.ಟಿ. ರವಿ, ಅಶ್ಲೀಲ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದರು. ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಗದ್ದಲ ತೀವ್ರವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು ಕೆಲಕಾಲ ಮುಂದೂಡಿದರು. ಬಳಿಕ ಆಡಳಿತ ಪಕ್ಷದ ಸದಸ್ಯರು ಸಭಾಪತಿ ಕೊಠಡಿಗೆ ತೆರಳಿ, ಸಿಟಿ ರವಿ ವಿರುದ್ಧ ದೂರು ನೀಡಿದ್ದು, ಅವರನ್ನು ಸದಸ್ಯ ಸ್ಥಾನದಿಂದ ಪದಚ್ಯುತಿಗೊಳಿಸುವಂತೆ ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post