ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಖ್ಯಾತ ನಟ ನಾಗಾರ್ಜುನ #ActorNagarjuna ಅವರ ಮಾಲೀಕತ್ವದ ಎನ್ ಕನ್ವೆನ್ಷನ್ ಸೆಂಟರ್ ನೆಲಸಮ ಮಾಡದಂತೆ ತೆಲಂಗಾಣ #Telangana ಹೈಕೋರ್ಟ್ ಮಧ್ಯಂತರ ತಡೆ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ.
ಮಾದಾಪುರದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್’ಗೆ #NConventionCentre ಕೆಲವು ಭಾಗಗಳನ್ನು ಹೈಡ್ರಾ ಅಧಿಕಾರಿಗಳು ಇಂದು ಮುಂಜಾನೆ ಧ್ವಂಸಗೊಳಿಡಿದ್ದಾರೆ. ಆದರೆ, ಈ ಕ್ರಮಕ್ಕೆ ನ್ಯಾಯಾಲಯ ತಡೆ ನೀಡಿದೆ.
ಈ ಸ್ಥಳದ ವಿವಾದ ನ್ಯಾಯಾಲಯದಲ್ಲಿದ್ದರೂ ನೋಟಿಸ್ ನೀಡದೇ ತೆರವು ಮಾಡಲಾಗಿದೆ ಎಂದು ನಾಗಾರ್ಜುನ ಮತ್ತೆ ತೆಲಂಗಾಣ ಹೈಕೋರ್ಟ್ #HighCourt ಮೆಟ್ಟಿಲೇರಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಕ್ಕೆ ಹೈಡ್ರಾ (ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮೇಲ್ವಿಚಾರಣೆ ಮತ್ತು ರಕ್ಷಣೆ ಸಂಸ್ಥೆ) ಸಂಸ್ಥೆ ಶನಿವಾರ ಆಸ್ತಿಯನ್ನು ನೆಲಸಮಗೊಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post