ಕಲ್ಪ ಮೀಡಿಯಾ ಹೌಸ್ | ನವದೆಹಲಿ |
2019ರ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಲಾಗಿದೆ ಎಂಬ ದೂರಿನ ಆಧಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.ಈ ಕುರಿತಂತೆ ಮಹತ್ವದ ಆದೇಶ ನೀಡಿರುವ ಸರ್ವೋಚ್ಛ ನ್ಯಾಯಾಲಯ, ಪ್ರಜ್ವಲ್ ರೇವಣ್ಣ ಅವರು 15ನೆಯ ವಯಸ್ಸಿಗೇ 23 ಕೋಟಿ ಆಸ್ತಿ ಹೊಂದಿದ್ದರು ಎಂದು ದೂರು ಸಲ್ಲಿಕೆಯಾಗಿದೆ. ಈ ಕುರಿತಂತೆ 2019ರ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ದಾಖಲೆ ಸಲ್ಲಿಸಲಾಗಿಲ್ಲ. ಈ ಮೂಲಕ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಲಾಗಿದೆ. ಅಲ್ಲದೇ, ಐಟಿ ಇಲಾಖೆಗೆ ಮಾಹಿತಿ ನೀಡದ ಆರೋಪವೂ ಸಹ ಇದೆ.ಹೀಗಾಗಿ, ಪ್ರಜ್ವಲ್ ವಿರುದ್ಧ ಐಟಿ ತನಿಖೆ ನಡೆಸಬೇಕು ಎಂದು ಹೇಳಿದೆ.ಪ್ರಜ್ವಲ್ ರೇವಣ್ಣ ವಿರುದ್ಧ ದೇವರಾಜೇಗೌಡ ಎನ್ನುವವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post