No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಅ.21ರಿಂದ ಬಿಗ್‌ಬಾಸ್ ಸೀಸನ್ 6 ಆರಂಭ: ಹೇಗಿದೆ ಗೊತ್ತಾ ಹೊಸ ಮನೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2018
in ಸಿನೆಮಾ
0
ಅ.21ರಿಂದ ಬಿಗ್‌ಬಾಸ್ ಸೀಸನ್ 6 ಆರಂಭ: ಹೇಗಿದೆ ಗೊತ್ತಾ ಹೊಸ ಮನೆ?
Share on FacebookShare on TwitterShare on WhatsApp

ಬೆಂಗಳೂರು: ಬಿಗ್‌ಬಾಸ್‌ನ ಆಗಮನದ ನಂತರ ದೇಶದಲ್ಲಿ ಜನರು ಟೆಲಿವಿಷನ್ ನೋಡುವ ರೀತಿಯೇ ಬದಲಾಗಿದೆ. ಬಿಗ್‌ಬಾಸ್ ಕನ್ನಡವೂ ಅಷ್ಟೆ. ಆರಂಭದಿಂದಲೂ ಜನಪ್ರಿಯತೆಯಲ್ಲಿ ಎಲ್ಲ ಶೋಗಳಿಗಿಂತಲೂ ಮುಂದಿದೆ.

ಬಿಗ್‌ಬಾಸ್ ಕನ್ನಡ ಸೀಸನ್ 5ರಲ್ಲಿ ಮೊಟ್ಟಮೊದಲ ಬಾರಿಗೆ ಜನಸಾಮಾನ್ಯರಿಗೆ ಪ್ರವೇಶ ಸಿಕ್ಕಿತು. ಈ ವರ್ಷವೂ ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳ ಹದವಾದ ಮಿಶ್ರಣ ನೋಡುಗರಿಗೆ ಮುದ ನೀಡಲು ಸಜ್ಜಾಗಿದೆ.

ಎಲ್ಲ ರಿಯಾಲಿಟಿ ಶೋಗಳ ಬಾಸ್ ಎಂದೇ ಕರೆಯಲ್ಪಡುವ ‘ಬಿಗ್‌ಬಾಸ್’ನ ಆರನೆಯ ಆವೃತ್ತಿ ಅಕ್ಟೋಬರ್ 21ರ ಸಂಜೆ 6 ಗಂಟೆಗೆ ಕಲರ್ಸ್ ಸೂಪರ್ ಚಾನೆಲ್‌ನಲ್ಲಿ ಆರಂಭವಾಗಲಿದೆ. ಸೋಮವಾರದಿಂದ ಪ್ರತಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿರುವ ಈ ಬೃಹತ್ ಶೋಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಈ ಕುರಿತಂತೆ ಬಿಗ್ ಬಾಸ್ ತಂಡ ಮಾಹಿತಿ ನೀಡಿದ್ದು, ಇದು ಬಹುತೇಕ ಸಾಮಾನ್ಯ ಜನರ ಬಿಗ್‌ಬಾಸ್ ಆಗಿರಲಿದೆ. ಹಾಗೆಂದು ಈ ಬಾರಿ ಸೆಲೆಬ್ರಿಟಿಗಳು ಇರುವುದೇ ಇಲ್ಲ ಎಂದೇನಿಲ್ಲ. ಒಟ್ಟು ಹದಿನೆಂಟು ಸ್ಪರ್ಧಿಗಳು ಈ ಬಾರಿ ಮನೆಯಲ್ಲಿ ಇರಲಿದ್ದಾರೆ. ಅವರಲ್ಲಿ ಅರ್ಧದಷ್ಟು ಮಂದಿ ಸೆಮಿ ಸೆಲೆಬ್ರಿಟಿಗಳು ಎಂದು ತಿಳಿಸಿದೆ.

ವಯಾಕಾಮ್ 18ನ ರೀಜನಲ್ ಚಾನೆಲ್‌ಗಳ ಹೆಡ್ ರವೀಶ್ ಕುಮಾರ್ ಮಾತನಾಡಿದ್ದು, ನಾವು ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವಾಗ ನಮ್ಮ ವೀಕ್ಷಕರ ಬೇಕು ಬೇಡ ಮತ್ತು ಅವರ ಆಸಕ್ತಿಗಳನ್ನು ಗಮನದಲ್ಲಿ ಇರಿಸಿಕೊಂಡಿರುತ್ತೇವೆ. ಕೇವಲ ಮೂರೇ ವರ್ಷಗಳಲ್ಲಿ ಕಲರ್ಸ್ ಸೂಪರ್ ಚಾನೆಲ್ ರೇಟಿಂಗ್‌ನಲ್ಲಾಗಲಿ, ಕಾರ್ಯಕ್ರಮ ವೈವಿಧ್ಯದಲ್ಲಾಗಲಿ ಭಾರೀ ಎತ್ತರಕ್ಕೆ ಏರಿದೆ. ಬಿಗ್‌ಬಾಸ್ ಯಾವ ರೀತಿಯ ಶೋ ಎಂದರೆ ಕಾರ್ಯಕ್ರಮ ನಡೆಯುವ ಅಷ್ಟೂ ದಿನ ಜನರನ್ನು ಟೆಲಿವಿಷನ್ ಸೆಟ್‌ಗೆ ಅಂಟಿ ಕೂರುವಂತೆ ಮಾಡುವಂಥದ್ದು ಎಂದಿದ್ದಾರೆ.

ರವೀಶ್ ಕುಮಾರ್

ವಯಾಕಾಮ್ 18 ಸಂಸ್ಥೆಯ ಕನ್ನಡ ಚಾನೆಲ್‌ಗಳು ಕನ್ನಡ ಮಾರುಕಟ್ಟೆಯ ಮುಂಚೂಣಿಯಲ್ಲಿ ಇದ್ದುಕೊಂಡು, ಅತ್ಯುತ್ತಮ ಗುಣಮಟ್ಟದ ರಿಯಾಲಿಟಿ ಶೋಗಳು ಹಾಗೂ ವೈವಿಧ್ಯಮಯ ಧಾರಾವಾಹಿಗಳನ್ನು ಜನರಿಗೆ ನೀಡುತ್ತಿವೆ ಎಂದಿದ್ದಾರೆ.

ಇನ್ನು ಈ ಕುರಿತಂತೆ ಮಾತನಾಡಿದ ವಯಾಕಾಮ್ 18 ಸಂಸ್ಥೆಯ ಕನ್ನಡ ಮಾರುಕಟ್ಟೆಯ ಬ್ಯುಸಿನೆಸ್ ಹೆಡ್ ಹಾಗೂ ಬಿಗ್‌ಬಾಸ್‌ನ ನಿರ್ದೇಶಕರೂ ಆಗಿರುವ ಪರಮೇಶ್ವರ ಗುಂಡ್ಕಲ್, ನಾವು ಈ ಶೋಗೆ ಸ್ಪರ್ಧಿಗಳನ್ನು ಹುಡುಕುವಾಗ ಸೆಲೆಬ್ರಿಟಿಗಳಿಗಿಂತ ಹೆಚ್ಚಾಗಿ ಕ್ಯಾರೆಕ್ಟರ್‌ಗಳನ್ನು ಹುಡುಕುತ್ತಿರುತ್ತೇವೆ. ಆ ಕ್ಯಾರೆಕ್ಟರ್‌ಗಳು ಸೆಲೆಬ್ರಿಟಿಗಳಲ್ಲಿಯೂ ಇರಬಹುದು, ಜನ ಸಾಮಾನ್ಯರಲ್ಲೂ ಇರಬಹುದು. ಈ ಬಾರಿಯ ಹದಿನೆಂಟೂ ಜನರು ಬಹಳ ಇಂಟರೆಸ್ಟಿಂಗ್ ಕ್ಯಾರೆಕ್ಟರ್‌ಗಳಾಗಿರುತ್ತಾರೆ ಎಂದರು.

ಪರಮೇಶ್ವರ ಗುಂಡ್ಕಲ್

ಒಮ್ಮೆ ಮನೆಯೊಳಗೆ ಹೋದ ಮೇಲೆ ಅವರು ಸೆಲೆಬ್ರಿಟಿಗಳೋ ಜನ ಸಾಮಾನ್ಯರೋ ಎಂಬ ಪ್ರಶ್ನೆ ಮುಖ್ಯವಾಗುವುದಿಲ್ಲ. ಅವರು ಎಷ್ಟು ಮನರಂಜನೆ ನೀಡುತ್ತಾರೆ ಎನ್ನುವುದಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಾಗಿದೆ ಎಂದಿದ್ದಾರೆ.

ಪ್ರತಿ ವರ್ಷದಂತೆ ಬಿಗ್‌ಬಾಸ್‌ನ ಬಹುದೊಡ್ಡ ಸೆಲೆಬ್ರಿಟಿ ಕಿಚ್ಚ ಸುದೀಪ್ ಎನ್ನುತ್ತಾರೆ ಪರಮ್. ಸುದೀಪ್ ಅವರ ಗತ್ತು, ಗೈರತ್ತು ಈ ಶೋನ ಬಹುದೊಡ್ಡ ಆಕರ್ಷಣೆಗಳಲ್ಲಿ ಒಂದು. ಅದು ಈ ಬಾರಿಯೂ ಮುಂದುವರಿಯಲಿದೆ ಎಂದಿದ್ದಾರೆ.

ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಮಾತನಾಡಿ, ನನ್ನ ಸಿನಿಮಾಗಳ ಹೊರತಾಗಿ ಪ್ರತಿ ವರ್ಷ ನಾನು ಕ್ರಿಕೆಟ್ ಆಡುತ್ತೇನೆ, ಪ್ರಯಾಣ ಮಾಡುತ್ತೇನೆ, ಅಡುಗೆಯನ್ನೂ ಮಾಡುತ್ತೇನೆ. ಹಾಗೆಯೇ ಬಿಗ್‌ಬಾಸ್ ನಡೆಸಿಕೊಡುತ್ತೇನೆ. ಇದು ನನಗೆ ಬಹಳ ಪ್ರಿಯವಾದ ವಿಷಯ. ಹೊಸ ಹೊಸ ಸ್ಪರ್ಧಿಗಳನ್ನು ಭೇಟಿಯಾಗಲು ನಾನು ಕೂಡಾ ತುಂಬಾ ಉತ್ಸುಕನಾಗಿದ್ದೇನೆ ಎನ್ನುತ್ತಾರೆ.

ಹೇಗಿದೆ ಗೊತ್ತಾ ಬಿಗ್ ಬಾಸ್ ಹೊಸ ಮನೆ?
ಬಿಡದಿಯ ಇನ್ನೋವೇಟಿವ್ ಫಿಲ್‌ಮ್ ಸಿಟಿಯಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ಅಗ್ನಿ ಅನಾಹುತದ ಬಗ್ಗೆ ನಿಮಗೆಲ್ಲ ಗೊತ್ತಿರಬಹುದು. ಆ ಅವಘಡದಲ್ಲಿ ಬಿಗ್‌ಬಾಸ್ ಮನೆಯೂ ಭಸ್ಮವಾಗಿ ಹೋಗಿತ್ತು. ಹಾಗಾಗಿ ಈ ಬಾರಿ ಸಂಪೂರ್ಣವಾಗಿ ಹೊಸದಾಗಿ ಮನೆಯನ್ನು ನಿರ್ಮಿಸಲಾಗಿದೆ.

ಈ ಬಾರಿಯ ಮನೆ ಇನ್ನಷ್ಟು ವಿಶಾಲವಾಗಿರಲಿದೆ. ಮೇಕಪ್ ಮಾಡಿಕೊಳ್ಳಲೆಂದೇ ಪೌಡರ್ ರೂಮ್ ಸೇರಿದಂತೆ ಹೊಸ ಆಕರ್ಷಣೆಗಳೂ ಮನೆಯಲ್ಲಿವೆ. ಮನೆಯ ಹೊರಗಿನ ಗಾರ್ಡನ್ ಏರಿಯಾದಲ್ಲಿ ಹೊಸದಾಗಿ ವಿಶೇಷವಾದ ಗಿಡವೊಂದನ್ನು ನೆಡಲಾಗಿದೆ. ಭಾರೀ ವೆಚ್ಚದ ಈ ಗಿಡವನ್ನು ಬೇರೆ ನಗರದಿಂದ ಇಲ್ಲಿಗೆ ತರಲಾಗಿದೆ.

ಇನ್ನು, ನಿರ್ಮಾಣದ ಹೊಣೆ ಹೊತ್ತಿರುವ ಎಂಡೆಮಾಲ್ ಶೈನ್ ಸಂಸ್ಥೆಯ ಸಿಇಓ ಅಭಿಷೇಕ್ ರೇಗೆ ಮಾತನಾಡಿದ್ದು, ನಾವು ಎಂಡೆಮಾಲ್ ಸಂಸ್ಥೆಯಲ್ಲಿರುವ ಎಲ್ಲರೂ ಇನ್ನೊಂದು ಸೀಸನ್‌ನ ಕನ್ನಡ ಬಿಗ್‌ಬಾಸ್ ನಡೆಸಿ ಕೊಡಲು ತುಂಬಾ ಸಿದ್ಧತೆ ಮಾಡಿಕೊಂಡಿದ್ದೇವೆ. ಸ್ಪರ್ಧಿಗಳಿಗೆ ಅನಿರೀಕ್ಷಿತ ತಿರುವುಗಳನ್ನು ನೀಡಿ ವೀಕ್ಷಕರಿಗೆ ಗರಿಷ್ಠ ಮಟ್ಟದ ಮನರಂಜನೆ ನೀಡುವುದು ನಮ್ಮೆಲ್ಲರ ಉದ್ದೇಶ ಎನ್ನುತ್ತಾರೆ.

ಕಿಚ್ಚ ಸುದೀಪ್ ಅವರ ಅತ್ಯುತ್ತಮ ನಿರೂಪಣೆ ಮತ್ತು ಸೆಮಿ ಸೆಲೆಬ್ರಿಟಿಗಳು ಹಾಗೂ ಜನಸಾಮಾನ್ಯರ ಅದ್ಭುತ ಮಿಶ್ರಣ ಈ ಬಾರಿ ನೋಡುಗರಿಗೆ ಭಾರೀ ಮಜಾ ನೀಡುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ.

ಈ ಬಾರಿಯ ಬಿಗ್‌ಬಾಸ್‌ನಲ್ಲಿ ಭಾಗವಹಿಸಲು ಜನರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಇದಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈಗ ಯಾರು ಮನೆಯೊಳಗೆ ಹೋಗುತ್ತಾರೆ ಎಂಬ ಕುತೂಹಲವೂ ಗರಿಗೆದರಿದೆ. ಅಂದರೆ ಕಳೆದ ಐದು ಸೀಸನ್‌ಗಳ ಕಾಲ ಈ ಶೋ ಜನರನ್ನು ರಂಜಿಸಿರುವ ರೀತಿ ಬಿಗ್‌ಬಾಸ್ ಬಗ್ಗೆ ಜನರಲ್ಲಿ ಅಷ್ಟರ ಮಟ್ಟಿನ ಕುತೂಹಲ ಹುಟ್ಟಿಸಿದೆ.

ಒಟ್ಟಿನಲ್ಲಿ ಬಿಗ್‌ಬಾಸ್ ಶುರುವಾಗುತ್ತದೆ ಎಂದರೆ ಬಿಗ್‌ಬಾಸ್ ಪ್ರಿಯರಿಗೆ ಹಬ್ಬದ ವಾತಾವರಣ. ಮುಂದಿನ ನೂರು ದಿನಗಳ ಕಾಲ ಅದರದ್ದೇ ಚರ್ಚೆ, ಅದರದ್ದೇ ಮಾತು.

ಬಿಗ್‌ಬಾಸ್ ಕಲರ್ಸ್ ಸೂಪರ್ ಚಾನೆಲ್‌ನಲ್ಲಿ ಪ್ರತಿ ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ. ಗ್ರ್ಯಾಂಡ್ ಓಪನಿಂಗ್ ಅಕ್ಟೋಬರ್ 21, ಭಾನುವಾರ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಮನೆಯೊಳಗೆ ಯಾರು ಹೋಗುತ್ತಾರೆ, ಅವರು ಯಾವ ರೀತಿ ಇರುತ್ತಾರೆ, ಅವರನ್ನು ಕಳುಹಿಸಿಕೊಡಲು ಯಾರು ಬರುತ್ತಾರೆ, ಸುದೀಪ್ ಏನು ಹೇಳುತ್ತಾರೆ- ಈ ಎಲ್ಲ ಪ್ರಶ್ನೆಗಳಿಗೆ ಅಂದು ಉತ್ತರ ದೊರೆಯಲಿದೆ.

Tags: Bigg Boss KannadaBigg Boss Season 2018kannada reality showKiccha SudeepSandlwood
Share196Tweet123Send
Previous Post

ಅಮೃತ್‌ಸರ ದುರಂತ: ಪ್ರಧಾನಿ ಮೋದಿ ಆಘಾತ

Next Post

Highlights: 20.10.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 20.10.2018

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL