ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಅವರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ವೃದ್ದಾಶ್ರಮವೊಂದರಲ್ಲಿ ಇದ್ದ ಜಯಶ್ರೀ ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದ ಅವರು ಕಳೆದ ಜುಲೈ ತಿಂಗಳಿನಲ್ಲೂ ಆತ್ಮಹತ್ಯೆಗೆ ಯತ್ನಿಸಿದ್ದರು.
ಕಳೆದ ವರ್ಷ ಜುಲೈ ತಿಂಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ ರಾಮಯ್ಯ, ತಮ್ಮ ಫೇಸ್’ಬುಕ್’ನಲ್ಲಿ ಖಿನ್ನತೆ ಮತ್ತು ಈ ಜಗತ್ತಿಗೆ ಗುಡ್ ಬೈ ಎಂದು ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು. ಅಲ್ಲದೆ ಈ ಪೋಸ್ಟ್ ಹಾಕಿದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಯಶ್ರೀಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post