ಕಲ್ಪ ಮೀಡಿಯಾ ಹೌಸ್ | ಬಿಹಾರ |
ಇಲ್ಲಿನ ವಿಧಾನಸಭಾ ಚುನಾವಣೆಗೆ #AssemblyElection ನಡೆದ ಚುನಾವಣೆಯ ಮತದಾನ ಆರಂಭವಾಗಿ ಒಂದು ಗಂಟೆ ಕಳೆದಿದ್ದು, ಈ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಮೈತ್ರಿ ಕೂಟ ಭಾರೀ ಮುನ್ನಡೆ ಕಾಯ್ದುಕೊಂಡಿದೆ.
9 ಗಂಟೆ ವೇಳೆಗೆ #NDA ಎನ್’ಡಿಎ ಮೈತ್ರಿ ಕೂಟ 130 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ #Mahaghatabandhan ಮೈತ್ರಿಕೂಟ 66, ಜೆಎಸ್’ಪಿ 2 ಹಾಗೂ ಇತರರು 2 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿದೆ. ಇದರಲ್ಲಿ ಕಾಂಗ್ರೆಸ್ #Congress ಪಕ್ಷ ಕೇವಲ 9 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
243 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಿಹಾರದಲ್ಲಿ ಸರ್ಕಾರ ರಚಿಸಲು 122 ಕ್ಷೇತ್ರಗಳಲ್ಲಿ ಯಾವುದೇ ಪಕ್ಷ ಗೆಲ್ಲುವುದು ಅನಿವಾರ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post